ಬಾಗೇಪಲ್ಲಿ | ಧುಮ್ಮುಕ್ಕಿದ ಚಿತ್ರಾವತಿ ಜಲಾಶಯ; ಜನರಲ್ಲಿ ಸಂತಸ

Date:

Advertisements

ಕಳೆದ ಕೆಲ ದಿನಗಳಿಂದ ಸುರಿದ ಭರ್ಜರಿ ಮಳೆಗೆ ಬಾಗೇಪಲ್ಲಿ ಪಟ್ಟಣಕ್ಕೆ ಕುಡಿಯುವ ನೀರನ್ನು ಸರಬರಾಜು ಮಾಡುವ ಚಿತ್ರಾವತಿ ಜಲಾಶಯ ತುಂಬಿ ಹರಿಯುತ್ತಿದ್ದು, ಪಟ್ಟಣ ಮತ್ತು ಸುತ್ತಮುತ್ತಲಿನ ಜನರ ಮೊಗದಲ್ಲಿ ಸಂತಸ ಮೂಡಿದೆ.

ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿಯ ಪರಗೋಡು ಸಮೀಪದಲ್ಲಿ ನಿರ್ಮಾಣ ಮಾಡಿರುವ ಚಿತ್ರಾವತಿ ಜಲಾಶಯ ಕಳೆದ ವರ್ಷ ಮಳೆಯ ಕೊರತೆಯಿಂದ ತುಂಬಿರಲಿಲ್ಲ. ಇದೀಗ ತಾಲೂಕಿನ ಬಹುತೇಕ ಎಲ್ಲೆಡೆ ಮತ್ತು ಚಿತ್ರಾವತಿ ಜಲಾನಯನ ಪ್ರದೇಶದಲ್ಲಿ ಸುರಿದ ಭರ್ಜರಿ ಮಳೆಯಿಂದಾಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿ ತುಂಬಿ ಹರಿಯುತ್ತಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಚಿತ್ರಾವತಿ ಜಲಾಶಯವನ್ನು ವೀಕ್ಷಿಸಲು ತಂಡೋಪ ತಂಡವಾಗಿ ನಾಗರೀಕರು ಹೋಗುತ್ತಿದ್ದಾರೆ.

ಚಿತ್ರಾವತಿ ಜಲಾಶಯ
ಬಾಗೇಪಲ್ಲಿ ತಾಲೂಕಿನ ಪರಗೋಡು ಸಮೀಪದ ಚಿತ್ರಾವತಿ ಜಲಾಶಯ ತುಂಬಿ ಹರಿಯುತ್ತಿರುವ ದೃಶ್ಯ.

ಒಮ್ಮೆ ಚಿತ್ರಾವತಿ ಜಲಾಶಯ ತುಂಬಿ ಹರಿದರೆ ಕನಿಷ್ಠ 2 ವರ್ಷದವರೆಗೆ ಬಾಗೇಪಲ್ಲಿ ಪಟ್ಟಣದಲ್ಲಿ ನೀರಿನ ಸಮಸ್ಯೆ ಇರುವುದಿಲ್ಲ ಎಂಬುದು ಸುತ್ತಮುತ್ತಲಿನ ಜನರು ಹಾಗೂ ರೈತರ ಸಂತಸಕ್ಕೆ ಪ್ರಮುಖ ಕಾರಣವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಈ ಕುರಿತು ಪ್ರತಿಕ್ರಿಯಿಸಿರುವ ಬಾಗೇಪಲ್ಲಿ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್‌, ಚಿತ್ರಾವತಿ ಜಲಾಶಯ ತುಂಬಿ ಹರಿದಿದ್ದು ಎಲ್ಲರಲ್ಲೂ ಸಂತಸ ತಂದಿದೆ. ಪ್ರಮುಖವಾಗಿ ಬಾಗೇಪಲ್ಲಿ ಪಟ್ಟಣದ ಜನತೆಗೆ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಭರ್ತಿಯಾಗಿರುವುದರಿಂದಾಗಿ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಶುಕ್ರವಾರ ಪುರಸಭೆಯ ವತಿಯಿಂದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಯವರ ನೇತೃತ್ವದಲ್ಲಿ ಬಾಗೀನವನ್ನು ಅರ್ಪಿಸಲಾಗುತ್ತದೆ ಎಂದರು.

  • ವರದಿ : ರಾ.ನ.ಗೋಪಾಲ ರೆಡ್ಡಿ, ಪತ್ರಕರ್ತ, ಬಾಗೇಪಲ್ಲಿ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X