ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯಲ್ಲೇ ಐದಾರು ಕುಟುಂಬಗಳು ಕುಟುಂಬ ರಾಜಕಾರಣದಲ್ಲಿದ್ದು, ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ ಅಲ್ಲವೆ? ಎಂದು ಪ್ರತಿಕ್ರಿಯಿಸುವ ಮೂಲಕ, ಕುಟುಂಬ ರಾಜಕಾರಣ ರಾಜಕೀಯದಲ್ಲಿ ಸ್ವಾಭಾವಿಕವಾಗಿದೆ. ಕಾಂಗ್ರೆಸ್ ಕುಟುಂಬ ರಾಜಕಾರಣ ಮಾಡುತ್ತದೆ ಎಂದು ಹೇಳುತ್ತಿದ್ದ ಬಿಜೆಪಿ ನಾಯಕರು ಇಂತಹ ಹೇಳಿಕೆಗಳನ್ನು ನೀಡುವ ಮೊದಲು ಯೋಚಿಸಬೇಕಾಗುತ್ತದೆ. ಪ್ರಸ್ತುತ ಬಿಜೆಪಿಯಲ್ಲಿ ಕುಟುಂಬ ರಾಜಕಾರಣವನ್ನೇ ಕಾಣಬಹುದಾಗಿದೆ. ಬಿಜೆಪಿಯಲ್ಲಿ ಸುಮಾರು ಐದಾರು ಕುಟುಂಬಗಳು ಕುಟುಂಬ ರಾಜಕಾರಣದಲ್ಲಿವೆ. ಹೇಳಿಕೆ ನೀಡುತ್ತಿದ್ದ ಬಿಜೆಪಿಗರೇ ಇದೀಗ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ.
ಇದನ್ನು ಓದಿದ್ದೀರಾ? ಧಾರವಾಡ | ಸಾಧನೆ ಹಾದಿಯಲ್ಲಿ ಸಮಸ್ಯೆಗಳು ಬರುವುದು ಸಹಜ: ಜಿಲ್ಲಾಧಿಕಾರಿ ದಿವ್ಯಪ್ರಭು
ಕಳೆದ 25 ವರ್ಷಗಳಿಂದ ನಾವು ಶಿಗ್ಗಾವಿಯಲ್ಲಿ ಗೆದ್ದಿಲ್ಲ. ಈ ಬಾರಿ ಗೆಲ್ಲಲು ಪಕ್ಷ ಪ್ರಾಮಾಣಿಕ ಕೆಲಸ ಮಾಡಲಿದೆ. ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಅಸಮಧಾನಗಳು ಹಾಗೂ ಒಂದಿಷ್ಟು ಗೊಂದಲಗಳು ಸಾಮಾನ್ಯ. 15 ಜನ ಆಕಾಂಕ್ಷಿಗಳಿದ್ದ ಕಾರಣ ಟಿಕೆಟ್ ವಿಳಂಬವಾಗಿದೆ. ಶಿಗ್ಗಾವಿಯಲ್ಲಿ ಅಭ್ಯರ್ಥಿಗಿಂತ ಪಕ್ಷ ಕೆಲಸ ಮಾಡುತ್ತದೆ. ನಮ್ಮ ಅಭ್ಯರ್ಥಿ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.