ದಾವಣಗೆರೆಯ ಆನಗೋಡು ಹೋಬಳಿಯ ಹೊನ್ನಾನಾಯ್ಕನಹಳ್ಳಿ ಗ್ರಾಮದಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಲ್ಲಿಕಾರ್ಜುನ್ ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳೆ ನಷ್ಟದಿಂದಾಗಿ ಮಾಡಿದ್ದ ಬ್ಯಾಂಕ್‌ನಲ್ಲಿ ಹಾಗೂ ಖಾಸಗಿಯವರ ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತ ರೈತನ ಪುತ್ರ ಅಜಯ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತ ಮಲ್ಲಿಕಾರ್ಜುನ್ ಒಂದು ಎಕರೆ ಜಮೀನು ಹೊಂದಿದ್ದರು. ಅವರು ಬೆಳೆ ಬೆಳೆಯಲು ಬೀಜ, ಔಷಧಿ, ಗೊಬ್ಬರ, ಕೂಲಿ ಹಾಗೂ ಇತರ ವೆಚ್ಚಗಳಿಗೆ ಸಾಲ ಮಾಡಿ ಕೃಷಿ ಮಾಡಿದ್ದರು.
ಕಳೆದ ನಾಲ್ಕು ವರ್ಷಗಳಿಂದ ಬೆಳೆ ಉತ್ತಮವಾಗಿ ಬಂದಿರಲಿಲ್ಲ. ಈ ಬಾರಿ ಉತ್ತಮ ಬೆಳೆ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಮಳೆಯು ಹೆಚ್ಚಾಇದರಿಂದ ಬೇಸತ್ತು ಅಪ್ಪ ಸಾವಿಗೆ ಶರಣಾಗಿದ್ದಾರೆ ಎಂದು ಅಜಯ್ ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ವಿಚಿತ್ರ ಘಟನೆ: ದೇವಸ್ಥಾನಕ್ಕೆ ತೆರಳಿ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಆರೋಪಿಯ ಬಂಧನ
ಬ್ಯಾಂಕ್ ಹಾಗೂ ಊರಿನಲ್ಲಿ ಜನರ ಬಳಿ ಸಾಲ ಮಾಡಿದ್ದರು. ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿಗಿದ್ದರಿಂದ ಜಮೀನು ಜೌಗು ಹಿಡಿದು ಬೆಳೆ ಹಾಳಾಗಿತ್ತು. ಆತ್ಮಹತ್ಯೆ ಸಂಬಂಧ ಪ್ರಕರಣ ದಾಖಲಾಗಿದೆ.
ನೆನಪಿಡಿ:
ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
