ಮೋಚಾ ಚಂಡಮಾರುತ; ಪಶ್ಚಿಮ ಮಯನ್ಮಾರ್‌ ಸಂಪರ್ಕ ಕಡಿತ, 700 ಮಂದಿಗೆ ಗಾಯ

Date:

Advertisements

ಪಶ್ಚಿಮ ಮಯನ್ಮಾರ್‌ ಕರಾವಳಿಯ 12 ಅಡಿ ಆಳದ ಸಮುದ್ರದ ನೀರಿನಲ್ಲಿ ಸಿಲುಕಿದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.

ಬಾಂಗ್ಲಾದೇಶ– ಮಯನ್ಮಾರ್‌ ಕರಾವಳಿಯಲ್ಲಿ ಮೋಚಾ ಚಂಡಮಾರುತದ ತೀವ್ರತೆ ಹೆಚ್ಚಾಗಿದ್ದು, ಪಶ್ಚಿಮ ಮಯನ್ಮಾರ್‌ನಲ್ಲಿ ಏಷ್ಯಾದ ರಾಷ್ಟ್ರಗಳಿಗೆ ಸಂಪರ್ಕ ಕಲ್ಪಿಸುವ ಸಂವಹನ ಕಡಿತಗೊಂಡಿದೆ. ಚಂಡಮಾರುತದಿಂದ 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕನಿಷ್ಠ 6 ಮಂದಿ ಸಾವನಪ್ಪಿದ್ದಾರೆ. ಪಶ್ಚಿಮ ಮಯನ್ಮಾರ್‌ ಕರಾವಳಿಯ 12 ಅಡಿ ಆಳದ ಸಮುದ್ರದ ನೀರಿನಲ್ಲಿ ಸಿಲುಕಿದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.

20 ಸಾವಿರಕ್ಕೂ ಹೆಚ್ಚು ಜನರು ಎತ್ತರದ ಪ್ರದೇಶಗಳಲ್ಲಿನ ಧಾರ್ಮಿಕ ಸ್ಥಳಗಳು, ಶಾಲೆಗಳು ಹಾಗೂ ಬಲವಾದ ಕಟ್ಟಡಗಳಲ್ಲಿ ರಕ್ಷಣೆ ಪಡೆಯುತ್ತಿದ್ದಾರೆ. ಭಾನುವಾರ ಸಂಜೆಯ (ಮೇ 15) ನಂತರ ಚಂಡಮಾರುತವು ಸ್ವಲ್ಪ ದುರ್ಬಲಗೊಂಡಿತ್ತು. ಆದರೆ ಬಹುತೇಕ ಪ್ರದೇಶಗಳಲ್ಲಿ ನೀರಿನ ಹರಿವು ಹಾಗೆಯೇ ಇದೆ. ಚಂಡಮಾರುತಕ್ಕೆ ಸಿಲುಕಿರುವ ಸಾವಿರಾರು ಮಂದಿ, ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಘಗಳ ನೆರವನ್ನು ಬಯಸುತ್ತಿದ್ದಾರೆ.

Advertisements

ಗಂಟೆಗೆ 209 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಮಯನ್ಮಾರ್‌ನ ಸಿಟ್ವೆ ಟೌನ್‌ಶಿಪ್ ಬಳಿ ಭೂಕುಸಿತ ಉಂಟಾಗಿದೆ. ಗಾಳಿಯ ವೇಗಕ್ಕೆ ಹಲವೆಡೆ ಮೊಬೈಲ್‌ ಟವರ್‌ಗಳು ಪುಡಿಪುಡಿಯಾಗಿದ್ದು, ಸ್ಥಳೀಯ ಪ್ರದೇಶಗಳು ಹಾಗೂ ಇತರ ದೇಶಗಳೊಂದಿನ ಸಂವಹನ ಕಡಿತಗೊಂಡಿದೆ. ಹಲವು ರಸ್ತೆಗಳಲ್ಲಿ ಹತ್ತಕ್ಕೂ ಹೆಚ್ಚು ಅಡಿ ನೀರು ತುಂಬಿಕೊಂಡಿದೆ. ಚಂಡಮಾರುತದ ರಭಸಕ್ಕೆ ನೂರಾರು ಮನೆಗಳು ಹಾಗೂ ಕಟ್ಟಡಗಳ ಛಾವಣಿಗಳು ಹಾರಿಹೋಗಿವೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಚುನಾವಣೆ | ಸದುಪಯೋಗವಾಗಲಿ ಕಾಂಗ್ರೆಸ್‌ ‘ಗ್ಯಾರಂಟಿ’

ಮೋಚಾ ಭೀತಿಯಿಂದಾಗಿ ಬಾಂಗ್ಲಾದೇಶದ ಕಾಕ್ಸ್ ಬಜಾರ್ ಪ್ರದೇಶದ ಸಾವಿರಾರು ಜನರನ್ನು ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರು. ಸೇಂಟ್ ಮಾರ್ಟಿನ್ ದ್ವೀಪದಲ್ಲಿ 300 ಮನೆಗಳು ಹಾನಿಗೊಂಡು ಸುಮಾರು ಹನ್ನೆರಡು ಮಂದಿ ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆ ಹಾಗೂ ಕರಾವಳಿ ಭಾಗಗಳಾದ ಪುರ್ಬಾ ಮೇದಿನಿಪುರ ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದಿಘಾ ಹಾಗೂ ಮಂದಾರಮಣಿ ಕರಾವಳಿ ಪ್ರದೇಶದಲ್ಲಿ ಎನ್‌ಡಿಆರ್‌ಎಫ್ ಅಲ್ಲದೆ, ಯಾವುದೇ ಪರಿಸ್ಥಿತಿಯಲ್ಲಿ ಜನರನ್ನು ಸ್ಥಳಾಂತರಿಸುವ ಅಗತ್ಯ ಬಂದರೆ ಅದಕ್ಕೆ ಪೂರಕವಾಗಿರುವ ವ್ಯವಸ್ಥೆಗಳನ್ನೂ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆಶ್ರಯ ಶಿಬಿರಗಳನ್ನೂ ನಿರ್ಮಿಸಲು ಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದ್ದು, ಯಾವುದೇ ಸಂದರ್ಭದಲ್ಲೂ ಚಂಡಮಾರುತ ಬಾಂಗ್ಲಾ- ಮಾಯನ್ಮಾರ್ ಗಡಿದಾಟುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X