ಬೇಲೆಕೇರಿ ಅದಿರು ಪ್ರಕರಣ | ಕಾಂಗ್ರೆಸ್ ಶಾಸಕ ​ಸತೀಶ್​ ಸೈಲ್​​ಗೆ ಏಳು ವರ್ಷ ಜೈಲು ಶಿಕ್ಷೆ, 9 ಕೋಟಿ ದಂಡ

Date:

Advertisements

ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್​ ಸೈಲ್​​ಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ₹9 ಕೋಟಿ ದಂಡ ವಿಧಿಸಿದೆ.

ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್​ 24ರಂದು ಶಾಸಕ ಸತೀಶ್​ ಸೈಲ್​ ದೋಷಿ ಎಂದು ತೀರ್ಪು ನೀಡಿ, ಶಿಕ್ಷೆಯ ಆದೇಶವನ್ನು ಕಾಯ್ದಿರಿಸಿತ್ತು. ಶನಿವಾರ ಅಂತಿಮ ವಿಚಾರಣೆ ನಡೆಸಿ, ಸತೀಶ್​ ಸೈಲ್​​ಗೆ 7 ವರ್ಷ ಜೈಲು ಶಿಕ್ಷೆ ಮತ್ತು ಜೊತೆಗೆ ₹9.60 ಕೋಟಿ ರೂ. ದಂಡ ವಿಧಿಸಿದೆ.

ನ್ಯಾಯಾಲಯವು ಮೊದಲ ಪ್ರಕರಣದಲ್ಲಿ ಸತೀಶ್​ ಸೈಲ್​​ಗೆ 60 ಲಕ್ಷ ಹಾಗೂ 2ನೇ ಪ್ರಕರಣದಲ್ಲಿ 9 ಕೋಟಿ ದಂಡ ವಿಧಿಸಲಾಗಿದೆ. ಒಟ್ಟು 9.60 ಕೋಟಿ ದಂಡ ವಿಧಿಸಿ, ಶಿಕ್ಷೆಯ ಪ್ರಮಾಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

Advertisements

ಇದನ್ನು ಓದಿದ್ದೀರಾ? ಮಂಡ್ಯ | ರಸ್ತೆ ಬದಿಯಲ್ಲಿದ್ದ ಮರಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿದ ಅರಣ್ಯ ಇಲಾಖೆ: ಪರಿಸರವಾದಿಗಳ ಆಕ್ರೋಶ

ಏನಿದು ಪ್ರಕರಣ?

ಬಳ್ಳಾರಿ, ಹೊಸಪೇಟೆ, ಸಂಡೂರು, ಚಿತ್ರದುರ್ಗದ ಅರಣ್ಯ ಪ್ರದೇಶಗಳಿಂದ ಅಕ್ರಮವಾಗಿ ಭಾರಿ ಪ್ರಮಾಣದ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗುತ್ತಿತ್ತು. 2010ರ ಮಾ.20ರಂದು ಅರಣ್ಯ ಇಲಾಖೆ ₹350 ಕೋಟಿ ರೂ. ಮೌಲ್ಯದ ಬರೋಬ್ಬರಿ 8.5 ಲಕ್ಷ ಮೆಟ್ರಿಕ್ ಟನ್‌ ಅದಿರು ಮುಟ್ಟುಗೋಲು ಹಾಕಿಕೊಂಡಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X