ಪಕ್ಷ ಕಟ್ಟದ ವ್ಯಕ್ತಿ ಮಾತು ಕೇಳಿ ರಾಜ್ಯದಲ್ಲಿ ಬಿಜೆಪಿ ಹಾಳಾಗಿದೆ: ದಿಂಗಾಲೇಶ್ವರ ಸ್ವಾಮೀಜಿ

Date:

Advertisements
  • ಯಡಿಯೂರಪ್ಪ ಕಣ್ಣೀರಿನಲ್ಲಿ ಕೊಚ್ಚಿ ಹೋದ ಬಿಜೆಪಿ ಸರ್ಕಾರ’
  • ‘ದಕ್ಷಿಣ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡರು’

“ಯಡಿಯೂರಪ್ಪ ಅವರ ಕಣ್ಣೀರನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಲಿದೆ ಎಂದು ಈ ಹಿಂದೆ ಹೇಳಿದ್ದೆ. ಅದು ಅಕ್ಷರಶಃ ನಿಜವಾಗಿದೆ. ಜೊತೆಗೆ ರಾಜಕೀಯ ವಾಸ್ತವ ಏನು ಎಂಬುದು ಆ ಪಕ್ಷದ ನಾಯಕರಿಗೆ ಅರಿವಾಗಿದೆ” ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ಹುಬ್ಬಳ್ಳಿ ತಾಲೂಕಿನ ನೂಲ್ವಿ ಹೊರವಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಅಧಿಕಾರ ಸಿಕ್ಕ ಸಂದರ್ಭದಲ್ಲಿ ಆ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೆ ತಿನ್ನಬಾರದ ಪೆಟ್ಟು ತಿನ್ನುತ್ತಾರೆ. ಈಗ ಅದನ್ನು ಅನುಭವಿಸುವಂತಾಗಿದೆ” ಎಂದು ತಿಳಿಸಿದರು.

“ಯಡಿಯೂರಪ್ಪ ಅವರು ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸಬೇಕು ಎಂದಿದ್ದರು. ಆದರೆ ಯಾವುದೋ ಕೆಟ್ಟ ಉದ್ದೇಶ ಅಥವಾ ಸ್ವಾರ್ಥಕ್ಕೆ ತೆಗೆದುಕೊಂಡ ಅಂದಿನ ನಿರ್ಧಾರ ಬಿಜೆಪಿಯ ಈ ಹೀನಾಯ ಸೋಲಿಗೆ ಕಾರಣ” ಎಂದರು.

Advertisements

“ಸ್ವಾಮೀಜಿಗಳು ಗಂಭೀರ ಹೇಳಿಕೆ ನೀಡಿದಾಗ, ಚಿಂತನ‌ ಮಂಥನ ಮಾಡಬೇಕು. ಕೇಸರಿ ಪಡೆ ಎಂದು ಹೇಳಿ ಅಧಿಕಾರಕ್ಕೆ ಬಂದು, ಖಾವಿಧಾರಿಗಳನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ” ಎಂದು ಕಿಡಿ ಕಾರಿದರು.

“ರಾಜ್ಯದ ಹಿರಿಯ ನಾಯಕರನ್ನು ಕಡೆಗಣಿಸಿದ್ದೇ ಬಿಜೆಪಿ‌ ಸೋಲಿಗೆ ಮುಖ್ಯ ಕಾರಣ. ಯಡಿಯೂರಪ್ಪ, ಲಕ್ಷ್ಮಣ ಸವದಿ, ಜಗದೀಶ್‌ ಶೆಟ್ಟರ್, ಕೆ.ಎಸ್‌.ಈಶ್ವರಪ್ಪ ಅವರನ್ನು ಕಡೆಗಣಿಸಿ ಬಿಜೆಪಿ ಪರಿತಪಿಸುತ್ತಿದೆ. ಪಕ್ಷ ಕಟ್ಟದ ವ್ಯಕ್ತಿ ಮಾತು ಕೇಳಿ ರಾಜ್ಯದಲ್ಲಿ ಹಾಳಾಗಿದೆ” ಎಂದು ಪರೋಕ್ಷವಾಗಿ ಬಿ ಎಲ್ ಸಂತೋಷ್ ವಿರುದ್ಧ ಕುಟುಕಿದರು.

“ಬ್ರಾಹ್ಮಣರ ಬಗ್ಗೆ ಮಾತನಾಡುವುದಕ್ಕೆ ನನಗೆ ಯಾವುದೇ ಭಯವಿಲ್ಲ. ನನಗೆ ಯಾರ ಅಂಕುಶವೂ ಇಲ್ಲ. ರಾಜ್ಯದ ನಾಯಕರನ್ನು ಬಹಳ‌ ಕೆಟ್ಟ ರೀತಿಯಲ್ಲಿ ‌ನೋಡಿಕೊಂಡರು. ಹಾಗೆಯೇ ದಕ್ಷಿಣ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡಿದ್ದೇ ಇದಕ್ಕೆಲ್ಲ ಕಾರಣ” ಎಂದು ಹರಿಹಾಯ್ದರು.

“ಕಾಂಗ್ರೆಸ್‌ನಲ್ಲಿ ಈ ಬಾರಿ ಲಿಂಗಾಯತ ನಾಯಕನಿಗೆ ಡಿಸಿಎಂ ಸ್ಥಾನ ‌ನೀಡಬೇಕು. ಸಮರ್ಥ, ಯೋಗ್ಯ ವ್ಯಕ್ತಿ ಮುಖ್ಯಮಂತ್ರಿಯಾಗಬೇಕು. ಇದು ನಮ್ಮ ಅಭಿಪ್ರಾಯ” ಎಂದು ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X