ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಯೊಬ್ಬರಿಗೆ ಸಂಚಾರಿ ಪಿಎಸ್‌ಐ ಗರಿಷ್ಠ ₹10,000 ದಂಡ ವಿಧಿಸಿ ವಸೂಲಿ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ.
ನ್ಯಾಯಾಲಯದ ಸಂಖ್ಯೆ ಸಿಸಿ 6730/24ರ ಪ್ರಕರಣದಲ್ಲಿ ಅಕ್ಟೋಬರ್ 23ರಂದು ₹10,000 ದಂಡ ವಸೂಲಾತಿ ಮಾಡಲಾಗಿದ್ದು, ವಾಹನ ಸವಾರರಿಗೆ ಎಚ್ಚರಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ತಮ್ಮ ಎಕ್ಸ್ ಖಾತೆಯಲ್ಲಿ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
“ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರನಿಗೆ ಭದ್ರಾವತಿ ಸಂಚಾರ ಪೊಲೀಸ್ ಠಾಣೆ ಪಿಎಸ್‌ಐ ₹10,000 ದಂಡ ವಿಧಿಸಿರುತ್ತಾರೆ” ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ..
ದೇಶದಲ್ಲಿ ಯಾವುದೇ ವ್ಯಕ್ತಿ ಮದ್ಯ ಸೇವಿಸಿ ವಾಹನ ಚಲಾವಣೆ ಮಾಡುತ್ತಿದ್ದರೆ ಸಂಚಾರಿ ಪೊಲೀಸರು ಆತನ ಮೇಲೆ ಸೆಕ್ಷನ್ 185ರಡಿ ದೂರು ದಾಖಲಿಸುತ್ತಾರೆ. ಬಿಎಸಿ ಪರೀಕ್ಷೆ ಮಾಡಿದ ನಂತರ ದಂಡ ವಿಧಿಸಬಹುದು. ವಾಹನವನ್ನೂ ಕೂಡಾ ಕಸ್ಟಡಿಗೆ ತೆಗೆದುಕೊಳ್ಳಬಹುದು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪೊಲೀಸ್ ಇಲಾಖೆ, ಸಾರ್ವಜನಿಕರ ಬೇಡಿಕೆ ಈಡೇರಿಸುವಂತೆ ಗೃಹ ಸಚಿವರಿಗೆ ಮನವಿ
ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 207ರ ಅಡಿಯಲ್ಲಿ ನಿಮ್ಮ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ. ವಾಹನದ ಎಲ್ಲ ದಾಖಲೆಗಳನ್ನೂ ಕೂಡಾ ಸಂಚಾರ ಪೊಲೀಸರು ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರೆ. ಏಳು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ₹2,000ದಿಂದ ₹10,000ದವರೆಗೆ ದಂಡ ವಿಧಿಸಲಾಗುತ್ತದೆ.
ಸಂಚಾರಿ ಪೊಲೀಸ್ ಅಲ್ಲ, ಸಂಚಾರ ಪೊಲೀಸ್. ಟ್ವೀಟ್ ಅಲ್ಲಿ ಬಳಕೆ ಸರಿ ಇದೆ.