‌ ಕೊನೆ ಕ್ಷಣದಲ್ಲಿ ಪ್ರವಾಸ ರದ್ದು ಮಾಡಿದ ಡಿಕೆಶಿ ; ನಾಳೆ ದೆಹಲಿಗೆ ?

Date:

Advertisements
  • ನಮ್ಮ ವರಿಷ್ಠರು ನನ್ನನ್ನು ಮತ್ತು ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದ್ದಾರೆ
  • ‘ಶಾಸಕಾಂಗ ಪಕ್ಷದ ಸಭೆಯಲ್ಲಿ 135 ಶಾಸಕರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ

“ನಮ್ಮ ವರಿಷ್ಠರು ನನ್ನನ್ನು ಮತ್ತು ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದ್ದಾರೆ. ನಾನು ಹೋಗುವುದು ಸ್ವಲ್ಪ ತಡವಾಗಿದೆ. ಇವತ್ತು ನನ್ನ ಜನ್ಮದಿನವಿದ್ದು, ಪೂಜೆ ಕಾರ್ಯಕ್ರಗಳಲ್ಲಿ ಬ್ಯುಸಿ ಇದ್ದೆ. ಎಂದಿದ್ದ ಡಿ ಕೆ ಶಿವಕುಮಾರ್‌ ಈಗ ತಮ್ಮ ಪ್ರವಾಸವನ್ನು ರದ್ದು ಮಾಡಿದ್ದಾರೆ.

ಕೊನೆಯ ಕ್ಷಣದ ಅವರ ನಿರ್ಧಾರ ರಾಜ್ಯ ರಾಜಕೀಯದ ಪಡಸಾಲೆಯಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕಿದೆ.

ಸದಾಶಿವನಗರ ನಿವಾಸದಲ್ಲಿ ಸೋಮವಾರ ಸಂಜೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಇಂದು ನನ್ನ ಜನ್ಮದಿನವಾಗಿದ್ದು, ನನ್ನ ಖಾಸಗಿ ಕಾರ್ಯಕ್ರಮದಲ್ಲಿ ನನ್ನ ಗುರುಗಳನ್ನು ಭೇಟಿ ಮಾಡಲಿದ್ದೇನೆ. ನಂತರ ನಾನು ದೆಹಲಿಗೆ ಪ್ರಯಾಣ ಬೆಳೆಸಬೇಕಿದೆ” ಎಂದಿದ್ದರು.

Advertisements

“ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ 135 ಶಾಸಕರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಎಲ್ಲ ಶಾಸಕರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ. ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ” ಎಂದು ಹೇಳಿದರು.

“ಡಬಲ್ ಇಂಜಿನ್ ಸರ್ಕಾರ ಹಾಗೂ ಭ್ರಷ್ಟಾಚಾರ ವಿರುದ್ಧ ನನ್ನ ಅಧ್ಯಕ್ಷತೆಯಲ್ಲಿ ಪಕ್ಷದ 135 ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಚುನಾವಣೆ ನಡೆಸಿದ ರೀತಿ, ಒಗ್ಗಟ್ಟಿನ ಪ್ರದರ್ಶನ ಎಲ್ಲವೂ ದೇಶಕ್ಕೆ ಮಾದರಿಯಾಗಿದ್ದು, ಅನೇಕ ನಾಯಕರುಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

“ನನ್ನ ವೈಯಕ್ತಿಕ ಬೆಂಬಲಕ್ಕೆ ಹೆಚ್ಚಿನ ಶಾಸಕರ ಸಂಖ್ಯಾಬಲವಿಲ್ಲದಿರಬಹುದು, ಆದರೆ ಪಕ್ಷದ 135 ಶಾಸಕರ ಸಂಖ್ಯೆ ನನ್ನ ಸಂಖ್ಯೆ. ನನ್ನನ್ನು ಪಕ್ಷದ ಅಧ್ಯಕ್ಷನಾಗಿ ಆಯ್ಕೆ ಮಾಡಿದಾಗ ನಾನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಭರವಸೆ ನೀಡಿದ್ದೆ. ನಾನು ಕೊಟ್ಟ ಮಾತನ್ನು ಈಡೇರಿಸಿದ್ದೇನೆ” ಎಂದರು.

“ನಾನು ಬೇರೆಯವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಓರ್ವ ವ್ಯಕ್ತಿ. ನಾನು ಧೈರ್ಯವಾಗಿ ಪಕ್ಷವನ್ನು ಮುನ್ನಡೆಸಿದ್ದು, ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದೇನೆ. ಕಳೆದ ಐದು ವರ್ಷಗಳಲ್ಲಿ ಏನೆಲ್ಲಾ ಆಗಿದೆ ಎಂದು ನಾನು ಬಹಿರಂಗಪಡಿಸುವುದಿಲ್ಲ. ಭವಿಷ್ಯದಲ್ಲಿ ಇದರ ಬಗ್ಗೆ ಮಾತನಾಡುತ್ತೇನೆ. ನಾವು ಮೈತ್ರಿ ಸರ್ಕಾರ ಕಳೆದುಕೊಂಡಾಗ ಶಾಸಕರು ಪಕ್ಷ ಬಿಟ್ಟು ಹೋದಾಗ ನಾವು ದೃತಿಗೆಡಲಿಲ್ಲ. ಧೈರ್ಯವಾಗಿ ಜವಾಬ್ದಾರಿ ಹೊತ್ತು, ಕೆಲಸ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ನನಗೆ ಧೈರ್ಯ ತುಂಬಿದ್ದು, ಈ ವಿಚಾರವನ್ನು ಅವರಿಗೆ ಬಿಡುತ್ತೇನೆ” ಎಂದು ತಿಳಿಸಿದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಕೆಶಿ ಪ್ರವಾಸದಿಂದ ಹಿಂದುಳಿದಿದ್ದು, ನಾಳೆ ಮುಂಜಾನೆ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X