ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದ್ದಾರೆ.
ರಾಜ್ಯ ಹಳ್ಳಿಕಾರರ ಸಂಘ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎಗೆ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ
ಸಮಾಜದಲ್ಲಿನ ವಿವಿಧ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯವಾಗಿದೆ. 2011 ರ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ರಷ್ಟು ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ ಎಂದು ಹೇಳಿದರು.
ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ. ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ಬೇಡಿಕೆ ಕಳುಹಿಸಿ ಅಧ್ಯಯನ ಮಾಡಿಸಿ ವರದಿ ಪಡೆಯಲಾಗುವುದು. ಆ ಬಳಿಕ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಲ್ಲಬೇಕು ಎನ್ನುವುದನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
