ಉತ್ತರಪ್ರದೇಶದ ಪ್ರತಾಪ್‌ಗಢದಲ್ಲಿ 25 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ವೃದ್ಧನನ್ನು ಬಂಧಿಸಲಾಗಿದೆ. ಆರೋಪಿಯನ್ನು 65 ವರ್ಷದ ರಿಖಿರಾಮ್ ಮೌರ್ಯ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವಾರ ಮೌರ್ಯ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಮತ್ತು ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್ಪಿ) ಸಂಜಯ್ ರೈ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ಮೌರ್ಯನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ
ಸಂತ್ರಸ್ತೆಯ ದೂರಿನ ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿ ರಿಖಿರಾಮ್ ಮೌರ್ಯನನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗುತ್ತಿದ್ದು, ಇದರಿಂದ ತನಿಖಾ ಪ್ರಕ್ರಿಯೆ ಇನ್ನಷ್ಟು ಬಲಗೊಳ್ಳಲಿದೆ ಎಂದು ಎಎಸ್ಪಿ ಸಂಜಯ್ ರೈ ತಿಳಿಸಿದ್ದಾರೆ.
ಸಂತ್ರಸ್ತೆಯ ಕುಟುಂಬವು ತ್ವರಿತವಾಗಿ ನ್ಯಾಯ ದೊರಕಿಸುವಂತೆ ಹಾಗೂ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನಿನಡಿ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.
ಇಂತಹ ಘಟನೆಗಳಿಂದ ಸಮಾಜದಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ನಿರ್ಮಾಣವಾಗುತ್ತದೆ. ಇಂತಹ ಘಟನೆಗಳನ್ನು ತಡೆಯಲು ಸಮಾಜದಲ್ಲಿ ಜಾಗೃತಿ ಮೂಡಿಸಿ ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ. ಅಪರಾಧಿಯನ್ನು ಯಾವುದೇ ಸಂದರ್ಭದಲ್ಲೂ ಬಿಡುವುದಿಲ್ಲ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
