ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ; 70ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಕಳೆದ ಗುರುವಾರ ನಡೆದಿದೆ.
ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಇತ್ತೀಚೆಗೆ ಸುರಿದ ಹಿಂಗಾರು ಮಳೆಯಿಂದಾಗಿ ಹೊಸ ನೀರು ಕಲಘಟಗಿ ಕೆರೆಗಳಿಗೆ ಹರಿದಿದೆ. ಈ ಸಂದರ್ಭದಲ್ಲಿ ಕಲುಷಿತ ನೀರು ಬಂದಿರುವ ಸಾಧ್ಯತೆಯಿದೆ. ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣಕುಮಾರ್ ಗನ್ನಿ ಅನ್ನು ಅಮಾನತುಗೊಳಿಸಲು ಆದೇಶ ಹರಡಿಸಿದರು.
ಇದನ್ನು ಓದಿದ್ದೀರಾ? ಧಾರವಾಡ | ಸಾಧನೆ ಹಾದಿಯಲ್ಲಿ ಸಮಸ್ಯೆಗಳು ಬರುವುದು ಸಹಜ: ಜಿಲ್ಲಾಧಿಕಾರಿ ದಿವ್ಯಪ್ರಭು
ಅಸ್ವಸ್ಥಗೊಂಡ 70 ಜನರ ಪೈಕಿ 10 ಮಂದಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹಾಗೂ 36 ಮಂದಿ ಕಲಘಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಚೇತರಿಸಿಕೊಂಡಿದ್ದಾರೆ. ಕಲುಷಿತ ನೀರು ಕುಡಿದ ಬಳಿಕ ಹಲವರಲ್ಲಿ ವಾಂತಿ ಹಾಗೂ ಅತಿಸಾರ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.