ತಿರುಪತಿಯ ಇಸ್ಕಾನ್ ದೇವಸ್ಥಾನಕ್ಕೆ ಭಾನುವಾರ ಬಾಂಬ್ ಬೆದರಿಕೆ ಹಾಕಲಾಗಿದೆ. ಐಸಿಸ್ ಭಯೋತ್ಪಾದಕರು ಇಸ್ಕಾನ್ ದೇವಸ್ಥಾನವನ್ನು ಸ್ಫೋಟಿಸುತ್ತಾರೆ ಎಂದು ಹೇಳುವ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ದೇವಾಲಯದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ತಿರುಪತಿ ಪೊಲೀಸರು ತಕ್ಷಣ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರು, ಬಾಂಬ್ ಸ್ಕ್ವಾಡ್‌ಗಳು ಮತ್ತು ಶ್ವಾನ ಘಟಕಗಳು ಇಸ್ಕಾನ್ ದೇವಸ್ಥಾನದಲ್ಲಿ ಪರಿಶೀಲಿಸಿದ್ದಾರೆ. ಆದರೆ, ದೇವಸ್ಥಾನದ ಆವರಣದಿಂದ ಯಾವುದೇ ಸ್ಫೋಟಕ ಅಥವಾ ಇತರ ಯಾವುದೇ ಆಕ್ಷೇಪಾರ್ಹ ವಸ್ತುಗಳು ಪತ್ತೆಯಾಗಿಲ್ಲ.
ಇದನ್ನು ಓದಿದ್ದೀರಾ? ತಿರುಪತಿ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ; ಇಮೇಲ್‌ನಲ್ಲಿ ಉದಯನಿಧಿ ಸ್ಟಾಲಿನ್ ಪತ್ನಿ ಹೆಸರು ಉಲ್ಲೇಖ
ಇದು ಮತ್ತೊಂದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಶಂಕಿಸಿದ್ದಾರೆ. ಹಾಗೆಯೇ ಈ ಹುಸಿ ಬೆದರಿಕೆ ಹಾಕಿದವರನ್ನು ಗುರುತಿಸಲು ಸೂಕ್ತ ಮತ್ತು ಅಗತ್ಯ ಪ್ರಯತ್ನಗಳು ನಡೆಯುತ್ತಿವೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀನಿವಾಸುಲು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ತಿರುಪತಿಗೆ ಇದು ನಾಲ್ಕನೇ ಹುಸಿ ಬಾಂಬ್ ಬೆದರಿಕೆಯಾಗಿದೆ. ಶನಿವಾರದಂದು ಎರಡು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಗಳು ಬಂದಿದೆ. ಅದಾದ ಬಳಿಕ ಹುಸಿ ಬೆದರಿಕೆ ಎಂದು ತಿಳಿದುಬಂದಿದೆ. ಅದಕ್ಕೂ ಮುನ್ನ ಪಟ್ಟಣದ ಇತರ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಇದರಿಂದಾಗಿ ಜನರಲ್ಲಿ ಆತಂಕ ಅಧಿಕವಾಗಿದೆ. ಸದ್ಯ ಎಫ್ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
