‌ವಕ್ಫ್‌ ಬೋರ್ಡ್‌ ಹೆಸರಲ್ಲಿ ರೈತರ ಜಮೀನು ಕಬಳಿಸುವ ಹುನ್ನಾರ, ಸಿಎಂ ಸ್ಪಷ್ಟನೆ ನೀಡಲಿ: ಆರ್‌ ಅಶೋಕ್

Date:

Advertisements
  • ವಕ್ಫ್‌ ಆಸ್ತಿಗಳ ಬಗ್ಗೆ ಗೊಂದಲವಿದ್ದರೆ ಜಂಟಿ ಸಂಸದೀಯ ಸಮಿತಿಯಲ್ಲಿ ಚರ್ಚಿಸಲಿ
  • ಸ್ವತಂತ್ರವಾಗಿ ಕ್ರಮ ಕೈಗೊಳ್ಳುವ ಅಧಿಕಾರ ಯಾರಿಗೂ ಇಲ್ಲ: ಆರ್‌ ಅಶೋಕ್

ಕಾಂಗ್ರೆಸ್‌ ಸರ್ಕಾರ ಮತ್ತು ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ. ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅವರು ಪತ್ರಿಕಾ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಲವ್ ಜಿಹಾದ್‌ನಿಂದ ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹ್ಮದ್‌, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ. ಈ ಹಿಂದೆ ಟಿಪ್ಪು ಸುಲ್ತಾನ್, ಔರಂಗಜೇಬನಂತಹ ಕೋಮು ಮತಾಂಧರು ಹಿಂದೂಗಳ ಭೂಮಿ, ಉದ್ಯೋಗ, ಬದುಕು ಕಿತ್ತುಕೊಂಡು ಮತಾಂತರ ಮಾಡಿದ್ದರು. ಈಗ ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ.

Advertisements

ಸಚಿವ ಜಮೀರ್ ಅಹ್ಮದ್‌ ಆಧುನಿಕ ಟಿಪ್ಪು ಸುಲ್ತಾನ್

ಸಚಿವ ಜಮೀರ್ ಅಹ್ಮದ್‌, ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಸಿಎಂ‌ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ. ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ. ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್‌ಗೆ ಸೇರಿಸಲು ತಂತ್ರ ಮಾಡಿದ್ದಾರೆ. ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರದಲ್ಲಿ ಚರ್ಚಿಸಲಿ

ಕೇಂದ್ರದ ಉದ್ದೇಶಿತ ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಕ್ಫ್ ಬೋರ್ಡ್ ವಿರೋಧ ವ್ಯಕ್ತಪಡಿಸಿದೆ. ವಕ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿ ರಚಿಸಿ, ಎಲ್ಲ ವಕ್ಫ್ ಬೋರ್ಡ್‌ಗಳಿಂದ ಮಾಹಿತಿ ಕೇಳಿದೆ. ಆದರೆ ಕರ್ನಾಟಕದ ವಕ್ಫ್ ಬೋರ್ಡ್ ಇದನ್ನು ವಿರೋಧಿಸಿದೆ. ನಾವು ಮಾಹಿತಿ ಕೊಡಲ್ಲ, ನಮ್ಮದು ಸ್ವಾಯತ್ತ ಸಂಸ್ಥೆ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಹಳೆಯ ಎಲ್ಲ ನಿಯಮ, ಕಾನೂನುಗಳಿಗೆ ಮೋದಿ ಸರ್ಕಾರ ಬದಲಾವಣೆ ತರಲಿದೆ. ಇದಕ್ಕೂ ಮುನ್ನ ಆದಷ್ಟು ಕರ್ನಾಟಕದ ಭೂಮಿ‌ ಕಬಳಿಸಬೇಕು ಎಂಬುದು ಇವರ ಉದ್ದೇಶ” ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಭೂಮಿ ಕಬಳಿಕೆ ಮಾಡಿಕೊಡುವ ಬದಲು, ಕೇಂದ್ರ ಸರ್ಕಾರದ ಜಂಟಿ ಸಲಹಾ ಸಮಿತಿ ಜೊತೆ ಚರ್ಚೆ ಮಾಡಲಿ. ಅದು ಬಿಟ್ಟು ಸ್ವತಂತ್ರವಾಗಿ ಕ್ರಮ ಕೈಗೊಳ್ಳುವ ಅಧಿಕಾರ ಯಾರಿಗೂ ಇಲ್ಲ. ವಿಜಯಪುರ ಜಿಲ್ಲೆಯಲ್ಲಿ ದೇವಸ್ಥಾನ, ಗುಡಿಗಳು ಕೂಡ ಇದೆ. ಅವೆಲ್ಲಕ್ಕೂ ಎಷ್ಟು ನೋಟಿಸ್ ನೀಡಲಾಗಿದೆ ಎಂದು ಸರ್ಕಾರ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂ ಬಾಯಿ ಬಿಡಲಿ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಈ ಕುರಿತು ಸ್ಪಷ್ಟನೆ ನೀಡಬೇಕು. ಇದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇತ್ತೇ ಎಂದು ತಿಳಿಸಬೇಕು. ಈಗ ರೈತರು ಕಂಗಾಲಾಗಿದ್ದಾರೆ. ಹಿಂದೂಗಳಿಗೆ ಭಯ ಶುರುವಾಗಿದೆ. ಈ ಸಮಯದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಂಡು ಜನರಿಗೆ ಸೂಕ್ತ ಮಾಹಿತಿ ಹಾಗೂ ಸ್ಪಷ್ಟೀಕರಣ ‌ನೀಡಬೇಕು ಎಂದು ಆರ್‌.ಅಶೋಕ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಎಂತಾ ಹೆಬ್ಬೆಟ್ಟು, ಬರೀ ಆಪಾದನೆನೇ ಆಯಿತು, ನೀನಿದ್ದಾಗ rss ಗೆಕೋಡಲಿಲ್ಲವೈ, ಫೇಕೂಗೆ gst ಅರ್ಥ ಆಗೋಕೆ 15 ವರುಷ ಬೇಕಾಯಿತು, ಇದು ಅರ್ಥ ಆಗೋಕೆ ನನಗೆಷ್ಟು ಸಮಯ ಹಿಡಿಯುತ್ತೋ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X