ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಬಿ ಅವರು ತಾಲೂಕಿನ ಲಕ್ಕುಂಡಿ ಮತ್ತು ಹರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಂತರ ನರೇಗಾ ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ರೈತರಿಗೆ ಮತ್ತು ಬಡವರಿಗೆ ಅನುಕೂಲವಾಗಿದೆ ಆದ್ದರಿಂದ ಎಲ್ಲರೂ ಇದರ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು” ಎಂದು ಹೇಳಿದರು.
ಮುಖ್ಯವಾಗಿ ಮನರೇಗಾ ಯೋಜನೆಯಡಿ ಎಲ್ಲ ಕೂಲಿಕಾರರು ಭಾಗವಹಿಸಿ ಸಾರ್ವಜನಿಕ ಆಸ್ತಿಗಳನ್ನು ಸೃಜನೆ ಮಾಡಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮನರೇಗಾ ಯೋಜನೆಯು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ ಎಂದರು.
ಮಹಿಳೆಯರಿಗೆ ಮತ್ತು ಪುರುಷರಿಗೆ ಸಮಾನ ಕೂಲಿ ₹316 ಗಳನ್ನು ಒದಗಿಸಲಾಗುತ್ತಿದೆ. ಪ್ರತಿ ಕುಟುಂಬಕ್ಕೆ ಒಂದು ವರ್ಷದಲ್ಲಿ 100 ದಿನಗಳಂತೆ ಉದ್ಯೋಗ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ಬೇರೆ ರಾಜ್ಯ, ಜಿಲ್ಲೆ ಹಾಗೂ ನಗರಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟುವುದೇ ಈ ಯೋಜನೆಯ ಮುಖ್ಯ ಉದ್ದೇಶ. ತಾವೆಲ್ಲರೂ ನಿಮ್ಮ ಸ್ವಂತ ಊರಿನಲ್ಲಿಯೇ ಇದ್ದು ಉದ್ಯೋಗ ಮಾಡಿ ಕೂಲಿ ಪಡೆಯಬಹುದು ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಹಿಜಾಬ್ ನಿಷೇಧ | ಕಾಂಗ್ರೆಸ್ ಕೈ ಬಿಡಲಿದೆ ಎಂಬ ವಿಶ್ವಾಸವಿದೆ: ಶಾಸಕಿ ಕನೀಝ್ ಫಾತಿಮಾ
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ನರೇಗಾ ಸಿಬ್ಬಂದಿ ಹಾಗೂ ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.