87ನೇ ಕನ್ನಡ ಸಾಹಿತ್ಯ ಸಮ್ಮೇಳನ; ಶಿವಮೊಗ್ಗ ಪ್ರವೇಶಿಸಿದ ಕನ್ನಡ ರಥಯಾತ್ರೆ

Date:

Advertisements

87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯು ರಾಜ್ಯದ ವಿವಿಧ ತಾಲೂಕುಗಳಿಗಲ್ಲಿ ಸಂಚರಿಸಿ ಸೋಮವಾರ ಮಧ್ಯಾಹ್ನ ಶಿವಮೊಗ್ಗ ನಗರವನ್ನು ಪ್ರವೇಶಿಸಿತು.

ಜಿಲ್ಲಾಡಳಿತ, ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪಧಾದಿಕಾರಿಗಳು ಜಿಲ್ಲೆಯ ಜನಪ್ರತಿನಿಧಿಗಳು ಭುವನೇಶ್ವರಿ ತಾಯಿಗೆ ಪುಷ್ಪ ನಮನ ಸಲ್ಲಿಸಿ ಕನ್ನಡದ ರಥವನ್ನು ಸಂಭ್ರಮದಿ ಸ್ವಾಗತಿಸಿದರು.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕುವೆಂಪು ರಂಗಮಂದಿರದವರೆಗೆ ಹೊರಟ ರಾಜಬೀದಿ ಉತ್ಸವದಲ್ಲಿ ವಿವಿಧ ಶಾಲೆಗಳ ಮಕ್ಕಳು ಹೆಜ್ಜೆ ಹಾಕಿದರು. ದುರ್ಗಿಗುಡಿ ಪ್ರೌಢಶಾಲೆಯ ಮಕ್ಕಳು ಸ್ವತಃ ಡೊಳ್ಳು ಬಾರಿಸುವ ಮೂಲಕ ಮೆರವಣಿಗೆಗೆ ವಿಶೇಷ ಮೆರಗು ನೀಡಿದರು. ಮೆರವಣಿಗೆಯ ಉದ್ದಕ್ಕೂ ಕನ್ನಡಪರ ಜಯಘೋಷ, ನಾದಸ್ವರದೊಂದಿಗೆ ನೆರೆದಿದ್ದ ಕನ್ನಡದ ಮನಸ್ಸುಗಳ ಹೆಜ್ಜೆಗಳು ಮುಂದೆ ಸಾಗಿದವು.

Advertisements

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಮಂಜುನಾಥ ಮಾತನಾಡಿ, “ಸಾಹಿತ್ಯ ಸಮ್ಮೇಳನ ಕನ್ನಡಿಗರ ಅಸ್ಮಿತೆಯಾಗಿದ್ದು, ಕನ್ನಡದ ಅನೇಕ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ಮತ್ತು ನಿರ್ಣಯಗಳು ನಡೆಯಲಿದೆ. ಮಾತೃಭಾಷೆಯಲ್ಲಿ ಪ್ರಬುದ್ಧತೆ ಪಡೆದಾಗ ಯಾವುದೇ ಭಾಷೆಯನ್ನು ಸುಲಲಿತವಾಗಿ ಕಲಿಯಬಹುದಾದ ಶಕ್ತಿ ನಮ್ಮ ಮಕ್ಕಳಿಗೆ ಸಿಗುತ್ತದೆ. ಅದಕ್ಕಾಗಿಯೆ ಪ್ರೌಢಶಾಲಾ ಹಂತದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸುವ ಹಾಗೂ ಸೃಜನಶೀಲ ಚಟುವಟಿಕೆಗಳಲ್ಲಿ ಮಕ್ಕಳು ತಮ್ಮನ್ನು ತಾವು ತೆರೆದುಕೊಳ್ಳಲು ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕಿದೆ” ಎಂದು ಹೇಳಿದರು.

ತಹಶೀಲ್ದಾರ್ ಬಿ ಎನ್ ಗಿರೀಶ್ ಮಾತನಾಡಿ, “ಕನ್ನಡ ಭಾಷೆಯಲ್ಲಿ ಮಾತನಾಡಲು ಯಾವುದೇ ಹಿಂಜರಿಕೆ ಬೇಡ. ಯಾವುದೇ ಶಾಲೆಗಳಲ್ಲಿ ಕನ್ನಡದಲ್ಲಿ ಮಾತನಾಡಿದವರಿಗೆ ದಂಡ ವಿಧಿಸಿದ್ದು ಕಂಡುಬಂದರೆ, ಅಂತಹ ಶಾಲೆಯ ವಿರುದ್ಧ ದಂಡನೆ ನೀಡಲಾಗುವುದು. ಏಕೆಂದರೆ ಅದೆಷ್ಟೋ ಭಾಷೆಗಳಿಗೆ ನಾವು ಒಗ್ಗಿಕೊಂಡರೂ ನಮ್ಮ ಅಂತರಂಗದ ಮಾತು ಕನ್ನಡ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ನಾಲ್ವಡಿಯವರು ಜನಪರ ವ್ಯಕ್ತಿತ್ವದ ಮಹಾನ್ ಚೇತನ: ಪ್ರೊ.ಬಿ. ಜಯಪ್ರಕಾಶ್ ಗೌಡ

ಇದೇ ವೇಳೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್ ಹೇಮಂತ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್ ಪ್ರಸನ್ನಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ ಎಸ್ ಚಂದ್ರಭೂಪಾಲ್, ಬಿಇಒ ರಮೇಶ್, ಸಂಚಾರಿ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್, ಕಸಾಪ ಪದಾಧಿಕಾರಿ ಎಂ ಎಂ ಸ್ವಾಮಿ, ಡಿ ಗಣೇಶ್, ಶಿಕಾರಿಪುರ ಹೆಚ್ ಎಸ್ ರಘು, ಕೆ ಎಸ್ ಹುಚ್ಚರಾಯಪ್ಪ, ಮಹಾದೇವಿ, ಅನುರಾಧ, ಪ್ರತಿಮಾ ಡಾಕಪ್ಪಗೌಡ, ಲಕ್ಷ್ಮೀ ಮಹೇಶ್, ಸಾವಿತ್ರಮ್ಮ, ಕುಬೇರಪ್ಪ, ಸತ್ಯನಾರಾಯಣ ಸೇರಿದಂತೆ ಇತರರು ಇದ್ದರು.

ಕಳೆದ ಎರಡು ದಿನಗಳಿಂದ ಶಿಕಾರಿಪುರ, ಸೊರಬ, ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ಸಂಚರಿಸಿದ್ದ ರಥವು ಸೋಮವಾರ ಸಂಜೆಯ ವೇಳೆಗೆ ಮಲವಗೊಪ್ಪ, ಭದ್ರಾವತಿ ಸಂಚರಿಸಿ, ಮಂಗಳವಾರ ಬೆಳಿಗ್ಗೆ ಚಿತ್ರದುರ್ಗ ಜಿಲ್ಲೆಯನ್ನು ಪ್ರವೇಶಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X