ಮೈಸೂರು | ನಾಲ್ವಡಿಯವರು ಜನಪರ ವ್ಯಕ್ತಿತ್ವದ ಮಹಾನ್ ಚೇತನ: ಪ್ರೊ.ಬಿ. ಜಯಪ್ರಕಾಶ್ ಗೌಡ

Date:

Advertisements

ನಾಡಿನ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಪ್ರಗತಿಗೆ ದುಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಇಡೀ ದೇಶ ಕಂಡ ಜನಪರ ಮತ್ತು ಪ್ರಗತಿಪರ ವ್ಯಕ್ತಿತ್ವದ ಅಪರೂಪದ ಮಹಾನ್ ಚೇತನ ಎಂದು ಮಂಡ್ಯ ಕರ್ನಾಟಕ ಸಂಘದ ಪ್ರೊ.ಬಿ. ಜಯಪ್ರಕಾಶ್ ಗೌಡ ಬಣ್ಣಿಸಿದರು.

ಮೈಸೂರಿನ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ಕುವೆಂಪು ಕಲಾನಿಕೇತನ ಸಂಸ್ಥೆಯು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೆಯ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಸಾಂಸ್ಕೃತಿಕ ಕಲಾ ಸಂಭ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

“ಶೈಕ್ಷಣಿಕ ಪ್ರಗತಿಗೆ ವಿಶೇಷವಾಗಿ ಒತ್ತು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ವಿಶ್ವವಿದ್ಯಾನಿಲಯ ಸ್ಥಾಪನೆ ಮೂಲಕ ಜ್ಞಾನ ಮತ್ತು ಅನುಭವವನ್ನು ಜನರ ಮನೆ ಬಾಗಿಲಿಗೆ ತಲುಪಿಸಿದರು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ, ಅವರಿಗಾಗಿ ಶಾಲೆ ತೆರೆದರು. ಬಾಲ್ಯ ವಿವಾಹ ರದ್ದು ಮಾಡಿ ಪ್ರಗತಿಪರತೆ ಮೆರೆದರು. ಜನಮುಖಿ ಕೆಲಸಗಳ ಕಾರಣ ಅವರ ಹೆಸರು ಕನ್ನಡ ನೆಲದಲ್ಲಿ ಶಾಶ್ವತವಾಗಿ ಉಳಿದಿರುತ್ತದೆ” ಎಂದರು.

Advertisements

ಹಿರಿಯ ಸಾಹಿತಿ ಡಾ. ಸಿ.ಪಿ. ಕೃಷ್ಣಕುಮಾರ್ (ಸಿಪಿಕೆ) ಮಾತನಾಡಿ, “ಇಂದಿನದ್ದು ಪ್ರಶಸ್ತಿಗಳ ಸುಗ್ಗಿಕಾಲವಾಗಿದ್ದು, ಎರಡು ದೃಷ್ಟಿಯಿಂದ ಈ ಪ್ರಶಸ್ತಿಗಳು ಸ್ವಾಗತಾರ್ಹವಾಗಿವೆ. ಒಂದು ಇನ್ನೂ ಬೆಳೆಯುವ ಹಂತದಲ್ಲಿ ಇರುವ ಉದಯೋನ್ಮುಖ ಸಾಧಕರಿಗೆ ಪ್ರೋತ್ಸಾಹದಾಯಕವಾಗಿ ನೀಡುವುದು. ಮತ್ತೊಂದು ಈಗಾಗಲೇ ಸಿದ್ಧಿಸಾಧನೆಯ ಹಂತ ತಲುಪಿದವರಿಗೆ ಕೃತಜ್ಞತೆಯ ರೂಪದಲ್ಲಿ ಪ್ರಶಸ್ತಿ ಸಲ್ಲಿಸುವುದು. ಈ ಎರಡೂ ನೆಲೆಯಲ್ಲಿ ಕೂಡ ನಾಲ್ವಡಿ ಹೆಸರಿನಲ್ಲಿ ಅರ್ಹ ಸಾಧಕರಿಗೆ ಪ್ರಶಸ್ತಿ ದೊರೆತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸು

ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ತುಮಕೂರಿನ ನರಸಿಂಹಗಿರಿ ಮಠದ ಪೀಠಾಧಿಪತಿ ಡಾ. ಹನುಮಂತನಾಥ ಸ್ವಾಮೀಜಿ ಮಾತನಾಡಿ, ಪ್ರಶಸ್ತಿಗಳು ಮಾರಾಟವಾಗುವ ಸ್ಥಿತಿ ಬಂದಿರುವ ಪ್ರಸ್ತುತ ಕಾಲಘಟ್ಟದಲ್ಲಿ, ಸರ್ಕಾರ ನಿಜವಾದ ಸಾಧಕರನ್ನು ಗುರುತಿಸಿ ಗೌರವಿಸಬೇಕು ಎಂದು ಸಲಹೆ ನೀಡಿದರು.

“ಯಾಂತ್ರಿಕ ಜಗತ್ತಿನಲ್ಲಿ ಕನ್ನಡವನ್ನು ಉಳಿಸಿ, ಬೆಳೆಸಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ. ನೆಲ, ಜಲ, ಭಾಷೆ, ಸಾಹಿತ್ಯದ ಬಗ್ಗೆ ಕನ್ನಡಿಗರಲ್ಲೇ ಗೌರವ ಕಡಿಮೆಯಾಗಿದೆ. ಯಾವುದೋ ದೇಶಕ್ಕೆ ತೆರಳಿದರೂ ಹಣ ಮಾಡಬಹುದೇ ಹೊರತು ನಮ್ಮ ಭಾರತೀಯ ಮಣ್ಣಿನ ಆತ್ಮೀಯತೆ ದೊರೆಯುವುದಿಲ್ಲ. ಹೀಗಾಗಿ ಕನ್ನಡ ನಾಡು ಕಟ್ಟುವ ಕೈಂಕರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ’ ಎಂದರು.

ಕಾರ್ಯಕ್ರಮದಲ್ಲಿ ಮೈಸೂರಿನ ಹಿರಿಯ ಕವಯಿತ್ರಿ ಡಾ. ಲತಾ ರಾಜಶೇಖರ, ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಟಿ. ಸತೀಶ್ ಜವರೇಗೌಡ, ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷ ಹಾಗೂ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ.ಬಿ. ಜಯಪ್ರಕಾಶ್ ಗೌಡ ಅವರಿಗೆ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಇದನ್ನು ಓದಿದ್ದೀರಾ? ಮೈಸೂರು | ದಸಂಸದಿಂದ ‘ಸಾಂವಿಧಾನಿಕ ಪ್ರಜಾಪ್ರಭುತ್ವ-ಸಮಕಾಲೀನ ಸವಾಲು’ ಕುರಿತು ವಿಚಾರ ಸಂಕಿರಣ

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹೆಚ್.ಕೆ. ರಾಮು, ಕೆ.ಎಸ್.ನ. ಟ್ರಸ್ಟ್ ಅಧ್ಯಕ್ಷ ಡಾ. ಕಿಕ್ಕೇರಿ ಕೃಷ್ಣಮೂರ್ತಿ, ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ರುದ್ರೇಶ್, ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಜಿ.ಪಿ.ಓ. ಚಂದ್ರು, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ಮತ್ತು ಎಂ. ಪ್ರಮೀಳಾ ಭರತ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕುವೆಂಪು ಕಲಾನಿಕೇತನ ಸಂಸ್ಥೆಯ ಅಧ್ಯಕ್ಷ ಕುವೆಂಪು ಪ್ರಕಾಶ್, ಮಾಜಿ ಅರಣ್ಯಾಧಿಕಾರಿ ಎಸ್. ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X