ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶ್ರೀಮತಿ ಶ್ರೀದೇವಿ ಕುಮಾರಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಶ್ರೀದೇವಿಯವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ, ಆಲ್ಲೂರು ಗ್ರಾಮ ಪಂಚಾಯತಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಪಂಚಾಯಿತಿ ಎಇಇ ಚೇತನ್ ಅವರು ಕಾರ್ಯನಿರ್ವಹಿಸಿದರು.
ಇದನ್ನೂ ಓದಿದ್ದೀರಾ:ಸ್ವತಂತ್ರ ಮೀಡಿಯಾದ ಬಾಯಿ ಬಡಿಯಲು ಕರಾಳ ಕಾಯಿದೆಗಳ ದುರುಪಯೋಗ: WAN- INFRA ಕಳವಳ
ಈ ವೇಳೆ ಉಪಾಧ್ಯಕ್ಷ ಕೌಷಿಕ್, ಮಾಜಿ ಅಧ್ಯಕ್ಷ ಜಯಶೀಲಾ ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
