ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ ನಡೆದಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಗಾಯಗೊಂಡವರಲ್ಲಿ 10 ಮಂದಿ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಕಾಸರಗೋಡಿನ ನೀಲೇಶ್ವರದಲ್ಲಿ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವ ನಡೆಯುತ್ತಿತ್ತು. ಈ ವೇಳೆ, ಪಟಾಕಿ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದೆ. ಪಾಟಾಕಿ ಅಂಗಡಿ ಸ್ಪೋಟಗೊಂಡಿದೆ. ಘಟನೆಯಲ್ಲಿ 150 ಮಂದಿಗೆ ಗಾಯವಾಗಿದೆ. ಅವರಲ್ಲಿ 10 ಮಂದಿ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಹಾಗೂ ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವಘಡಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಕಾಸರಗೋಡು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವೀರರ್ ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರವಿದೆ. ಅಲ್ಲಿನ ಪಾಟಾಕಿಗಳಿಗೆ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂಬ ಅನುಮಾನವಿದೆ. ಪಟಾಕಿ ಸಂಗ್ರಹಾಗಾರದಲ್ಲಿ ಸುರಕ್ಷತಾ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಂಡಿಲ್ಲ ಎಂಬ ಆರೋಪಗಳೂ ಇವೆ ಎಂದು ಪೊಲೀಸರು ತಿಳಿಸಿದ್ದಾರೆ. ಪಟಾಕಿ ಸಂಗ್ರಹಿಸಲು ಸಗ್ರಹಾಗಾರದವರು ಯಾವುದೇ ಅನುಮತಿ ತೆಗೆದುಕೊಂಡಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿರುವ ಪೊಲೀಸರು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.