ಕೋಮುದ್ವೇಷಕ್ಕೆ ಪ್ರಚೋದನೆ ಆರೋಪ: ಯತ್ನಾಳ್, ಸೂಲಿಬೆಲೆ, ಸಿ ಟಿ ರವಿ ವಿರುದ್ಧ ದೂರು ದಾಖಲು

Date:

Advertisements

ವಕ್ಫ್ ಆಸ್ತಿಗಳ ಬಗ್ಗೆ ತಪ್ಪು ಮಾಹಿತಿ ಹರಡುವ ಮೂಲಕ ಇಸ್ಲಾಂ ಮತ್ತು ಮುಸ್ಲಿಮರ ಮಾನಹಾನಿ ಹಾಗೂ ಕೋಮುದ್ವೇಷಕ್ಕೆ ಪ್ರಚೋದನೆ ನೀಡುತ್ತಿರುವ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮತ್ತು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಿದಾಯತ್ ಉಲ್ಲಾಖಾನ್ ಅವರು ಶಿವಾಜಿನಗರದ ಉಪಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಳ ಮೀಸಲಾತಿ ತೀರ್ಮಾನ: ಹೋರಾಟಕ್ಕೆ ಸಂದ ಜಯ, ಕಾಯಿಸದಿರಲಿ ಸರ್ಕಾರ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪರಿಷತ್ ಸದಸ್ಯ ಸಿ.ಟಿ.ರವಿ, ಮತ್ತು ಚಕ್ರವರ್ತಿ ಸೂಲಿಬೆಲೆ ಅವರು ಅಕ್ಟೋಬರ್ 15ರಂದು ವಿಜಯಪುರದಲ್ಲಿ ಕೋಮು ದ್ವೇಷ ಭಾಷೆ ಬಳಸಿ ಮಾತನಾಡಿದ್ದು, ವಕ್ಫ್ ಆಸ್ತಿಗಳ ಬಗ್ಗೆ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಅವರ ಭಾಷಣಗಳು ಇಸ್ಲಾಂ ಮತ್ತುಅದರ ಅನುಯಾಯಿಗಳನ್ನು ನಿಂದಿಸುವಂತಿದ್ದು, ಭಯವನ್ನು ಹುಟ್ಟುಹಾಕುವಂತಿದೆ. ದ್ವೇಷವನ್ನು ಪ್ರಚೋದಿಸುವ ಮತ್ತುಸಮಾಜದಲ್ಲಿ ಕೋಮು ಅಶಾಂತಿಯನ್ನು ಉಂಟು ಮಾಡುವ ಸಂಘಟಿತ ಪ್ರಯತ್ನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Advertisements

ಸಾಮಾಜಿಕ ಸಾಮರಸ್ಯವನ್ನು ಹಾಳುಮಾಡಲು ಪ್ರಯತ್ನಿಸಿರುವ ಯತ್ನಾಳ್, ಸಿ.ಟಿ.ರವಿ ಮತ್ತು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಜರುಗಿಸಬೇಕೆಂದು ಹಿದಾಯತ್‍ ಉಲ್ಲಾ ಖಾನ್ ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X