ಧಾರವಾಡದ ಆರ್. ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 14 ಮತ್ತು 17 ವರ್ಷದ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ವಿಶೇಷ ಚೇತನ ಸ್ಪರ್ಧೆ ನಡೆಯಿತು.
ಈ ಸ್ಪರ್ಧೆಯಲ್ಲಿ ನವಲಗುಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ್ ಕಣೋಜ ಉದ್ದ ಜಿಗಿತ ಹಾಗೂ 50 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ವಿಜೇತನಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದರು.