ಸುಪ್ರೀಂ ಕೋರ್ಟ ತೀರ್ಪಿನಂತೆ ಒಳಮೀಸಲಾತಿ ವರ್ಗಿಕರಣ ಜಾರಿಗೊಳಿಸದೇ ಸರ್ಕಾರ ವಂಚಿಸಿ, ಆಯೋಗ ರಚಿಸಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ನೌಕರರ ಸಂಘದ ವತಿಯಿಂದ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಕಳೆದ 3 ದಶಕಗಳಿಂದ ನಿರಂತರ ಹೋರಾಟ ನಡೆಸಿದ ಮಾದಿಗ ಸಮುದಾಯವು ಪರಿಶಿಷ್ಟ ಜಾತಿಯಲ್ಲಿ ಆಯಾ ಜನಸಂಖ್ಯೆಗೆ ಅನುಗುಣವಾಗಿ ಒಳಮಿಸಲಾತಿ ಜಾರಿಗಾಗಿ ಹೋರಾಟ ನಡೆಸುತ್ತಿದೆ. ಕಾಂಗ್ರೇಸ್ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ಮೊದಲನೇ ಸಚಿವ ಸಂಪುಟದಲ್ಲಿ ಒಳಮಿಸಲಾತಿ ಜಾರಿಗೊಳಿಸುವುದಾಗಿ ಘೋಷಣೆ ಮಾಡಿತ್ತು. ಆ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದರು.
ಕರ್ನಾಟಕ ರಾಜ್ಯದಲ್ಲಿ ಒಳಮಿಸಲಾತಿ ವರ್ಗಿಕರಣ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಮೂರು ತಿಂಗಳಿನಿಂದ ರಾಜ್ಯಾದ್ಯಂತ ನಿರಂತರ ಹೋರಾಟಗಳನ್ನು ನಡೆಸಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಂಟು ನೆಪಗಳನ್ನು ಹೇಳುತ್ತಾ ಸಾಮಾಜಿಕ ನ್ಯಾಯದ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ. ರಾಜ್ಯದಲ್ಲಿ 2011ರ ಜನಗಣತಿ ಮತ್ತು ಹಲವು ಆಯೋಗದ ವರದಿಗಳು ಅಂಕಿ ಅಂಶಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಸರ್ಕಾರ ದತ್ತಾಂಶಗಳ ನೆಪವೊಡ್ಡಿ ಕಳೆದ ಮೂರು ತಿಂಗಳಿನಿಂದ ಕಾಲಹರಣ ಮಾಡಿದ್ದಾರೆ. ಭಾರತದ ಸುಪ್ರೀಂ ಕೊರ್ಟ ನೀಡಿದ ತಿರ್ಪುನ್ನು ಜಾರಿಗೊಳಿಸಲು ಕಾಂಗ್ರೆಸ್ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರ ತರಾತುರಿಯಲ್ಲಿ ಸಚಿವ ಸಂಪುಟದಲ್ಲಿ ಆಯೋಗ ರಚಿಸುವುದರ ಮೂಲಕ ಸುಪ್ರೀಂ ಕೋರ್ಟ ಆದೇಶವನ್ನು ಉಲ್ಲಂಘಿಸಿದ್ದಾರೆ. ಉಪ ಚುನಾವಣೆಯಲ್ಲಿ ಓಟಿನ ಆಸೆಗಾಗಿ ಪರಿಶಿಷ್ಟರ ದಿಕ್ಕು ತಪ್ಪಿಸಲು ಕಾಟಾಚಾರಕ್ಕೆ ನಿರ್ಣಯ ಘೋಷಿಸಿದೆ ಎಂದು ಸರ್ಕಾರದ ನಿರ್ಧಾರವನ್ನು ಖಂಡಿಸುತ್ತೇವೆ ಎಂದರು.
ಸರ್ಕಾರ ಈಗ ಆಯೋಗ ರಚಿಸುವ ಅಗತ್ಯವಿಲ್ಲ, ವರದಿ ಪಡೆಯುವ ಅಗತ್ಯವೂ ಇರುವುದಿಲ್ಲ. ವಿನಾಕಾರಣ ಕಾಲಹರಣ ಮಾಡುವ ಮೂಲಕ ಶೋಷಿತ ಸಮುದಾಯದ ಪರಿಶಿಷ್ಟರನ್ನು ವಂಚಿಸುವ ಹುನ್ನಾರ ನಡೆಸಿದ್ದಾರೆ. ಈ ಕೂಡಲೇ ಸರ್ಕಾರ ಸುಪ್ರೀಂ ಕೊರ್ಟ ತಿರ್ಪಿನಂತೆ ಯಥಾವತ್ತಾಗಿ ಒಳಮಿಸಲಾತಿ ಜಾರಿಗೊಳಿಸಬೇಕು. ತಪ್ಪಿದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ನೀಡುತ್ತೇವೆ ಎಂದರು.
ಇದನ್ನು ಓದಿದ್ದೀರಾ? ಧಾರವಾಡ | 50 ಮೀಟರ್ ಓಟದ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಅಭಿಷೇಕ್ ಕಣೊಜ್
ಸುದ್ದಿಗೋಷ್ಠಿಯಲ್ಲಿ ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ಡಾ. ವಿಜಯ ಎಮ್. ಗುಂಟ್ರಾಳ, ಬಸಪ್ಪ ಮಾದರ, ಮೇಘರಾಜ ಹಿರೇಮನಿ, ಗಾಳೆಪ್ಪ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ, ದತ್ತಪ್ಪ ಆಪೂಸಪೇಟ್, ಲಕ್ಷ್ಮೀ ಬೇತಾಪಲ್ಲಿ ಭಾಗವಹಿಸಿದ್ದರು.