ರಾಯಚೂರು | ಸರ್ಕಾರಿ ಶಾಲೆಗಳಿಗೆ ತಕ್ಷಣ ಶಿಕ್ಷಕರನ್ನು ನೇಮಿಸಲು ಎಸ್ಎಫ್‌ಐ ಒತ್ತಾಯ

Date:

Advertisements

ಹೆಚ್ಚುವರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು ಹೆಚ್ಚಿಸಲು ಆಗ್ರಹಿಸಿ ಎಸ್‌ಎಫ್‌ಐ ಹಾಗೂ ಅತಿಥಿ ಶಿಕ್ಷಕರ ನೇತೃತ್ವದಲ್ಲಿ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ರಾಯಚೂರು ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ಮೂಲಕ ಆಗಮಿಸಿ, ಸರ್ಕಾರದ ವಿರುದ್ದ ಘೋಷಣೆ ಹಾಕಿದರು. ನಂತರ ಗ್ರೇಡ್ 2 ತಹಶೀಲ್ದಾರ್ ಪರಶುರಾಮ ಅವರಿಗೆ ಹಕ್ಕೊತ್ತಾಯ ಮನವಿ ಪತ್ರವನ್ನು ಸಲ್ಲಿಸಿದರು.

ಕಲ್ಯಾಣ ಕರ್ನಾಟಕದಲ್ಲಿ 14,107 ಶಿಕ್ಷಕರ ಹುದ್ದೆ ಖಾಲಿ ಇವೆ. ಕನಿಷ್ಟ 10,000 ಅಧಿಕವಾಗಿ ಪ್ರಾಥಮಿಕ ಮತ್ತು ಪ್ರೌಢ(ಮಾಧ್ಯಮಿಕ) ಶಿಕ್ಷಕರ ನೇಮಕಾತಿಯನ್ನು ಹೆಚ್ಚಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ 10,000 ಮತ್ತು ಪ್ರೌಢಶಾಲೆ ಶಿಕ್ಷಕರು 3500 ಸೇರಿದಂತೆ ಒಟ್ಟು 14,107ಹುದ್ದೆಗಳು ಖಾಲಿ ಇದ್ದು, ಅಂದರೆ ಡಿ.ಎಡ್ ಪದವೀಧರರಿಗೆ 4428 ಹುದ್ದೆಗಳು, ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳು 78 ಹುದ್ದೆಗಳು ಪ್ರೌಢಶಾಲಾ ಶಿಕ್ಷಕರ 121 ಹುದ್ದೆಗಳ ನೇಮಕ ಅವೈಜ್ಞಾನಿಕವಾಗಿದೆ. ಆದ್ದರಿಂದ ಖಾಲಿ ಇರುವ ಹುದ್ದೆಗಳಿಗೆ ಶೇ.80ರಷ್ಟು ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

Advertisements

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು ಹೆಚ್ಚಿಸಿ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಶೈಕ್ಷಣಿಕವಾಗಿ ಬಲಗೊಳಿಸಬೇಕು. ಕಳೆದ 2022ರ ನೇಮಕಾತಿಯಲ್ಲಿ ಉಳಿಕೆ ಸ್ಥಾನಗಳು 800-900 ಸೇರಿಸಿ ನೇಮಕಾತಿ ಮಾಡಬೇಕು. ಇದಕ್ಕೆ ಹಣಕಾಸು ಇಲಾಖೆ ಅನುಮತಿ ಬೇಕಾಗಿರುವುದಿಲ್ಲ ಹಾಗೂ 2022-23 ರ ಹಣಕಾಸು ಇಲಾಖೆ 2300 ಹೈಸ್ಕೂಲ್ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಅದನ್ನು ಕೂಡ ನೇಮಕಾತಿ ಮಾಡಬೇಕು ಎಂದು ಮನವಿ ಮಾಡಿದರು. ಪದವಿ ಮತ್ತು ಬಿ.ಎಡ್ ಅಂಕಗಳನ್ನು ಕೈಬಿಟ್ಟು ಸಿಇಟಿ, ಮತ್ತು ಟಿಇಟಿ ಅಂಕಗಳನ್ನು ಮೆರಿಟ್ ಪಟ್ಟಿಗೆ ಪರಿಗಣಿಸಬೇಕೆಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಮೂಡಿಗೆರೆ | ಸಮುದಾಯ ಭವನವನ್ನೇ ದಾಸ್ತಾನನ್ನಾಗಿಸಿಕೊಂಡು ದುರ್ಬಳಕೆ ಮಾಡಿಕೊಂಡ ಗುತ್ತಿಗೆದಾರ!

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಮೇಶ ವೀರಾಪುರ, ಪವನ್ ಕುಮಾರ್ ಕಮದಾಳ, ಖಾಸೀನಾಥ್,ರಂಗಪ್ಪ ನಾಯಕ , ಚಂದ್ರು ಎಂ , ಮಹಾಲಿಂಗ ದೊಡ್ಡಮನಿ, ಖಾಸಿಂ ಪಟೇಲ್, ಅಮೀರ್ ಬಹದ್ದೂರು, ಈರನಗೌಡ, ದೇವೇಂದ್ರ, ಶರಣು, ರಾಜೇಶ್ವರಿ, ಶಿವಾನಂದ, ಆಂಜನಪ್ಪ, ಸುರೇಶ್, ವೆಂಕಟೇಶ ಈರೆಡ್ಡಿ, ಮಹಾದೇವಿ ಅನೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X