ರಾಯಚೂರು | ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಝಿ ಕಾಯ್ದೆ ರದ್ದುಗೊಂಡಿಲ್ಲ: ಖಾಝೀಸ್ ವೆಲ್‌ಫೇರ್ ಟ್ರಸ್ಟ್‌

Date:

Advertisements

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಝಿ ಕಾಯ್ದೆ ರದ್ದುಗೊಂಡಿಲ್ಲ. ಆದರೂ ವಕ್ಫ್‌ ಇಲಾಖೆಯ ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ಸಮುದಾಯದ ಜನರನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ಖಾಝೀಸ್ ವೆಲ್‌ಫೇರ್ ಅಂಜುಮನ್ ಟ್ರಸ್ಟ್‌ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ರಾಯಚೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಖಾಝೀಸ್ ವೆಲ್‌ಫೇರ್ ಅಂಜುಮನ್ ಟ್ರಸ್ಟ್‌ ಕಾರ್ಯದರ್ಶಿ ಮೊಹಮ್ಮದ್ ಆದಂ ಖಾನ್, “ಒಂದು ತಿಂಗಳೊಳಗೆ ಕಲ್ಬುರ್ಗಿ ಹೈಕೋರ್ಟ್‌ ಆದೇಶದಂತೆ ಖಾಝಿಗಳಿಗೆ ಅವಕಾಶ ನೀಡದೆ ಹೋದಲ್ಲಿ ನ್ಯಾಯಾಂಗ ನಿಂದನೆ ಕೇಸು ದಾಖಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

“2012 ಮಾರ್ಚ್‌ 19ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿ ಕಲ್ಯಾಣ ಕರ್ನಾಟಕ ಜಿಲ್ಲೆ ಹೊರತುಪಡಿಸಿ ಖಾಝಿ ಕಾಯ್ದೆ ರದ್ದುಗೊಳಿಸಿದೆ. ಅಧಿಸೂಚನೆ ಕಲಂ 4(1) ಮತ್ತು (3)ರಲ್ಲಿ ಉಲ್ಲೇಖಿಸಿರುವಂತೆ ಖಾಝಿಗಳಿಗೆ ಮದುವೆ ಪ್ರಮಾಣ ಪತ್ರ ನೀಡಲು ಅಧಿಕಾರ ಮಂದುವರೆಸಿದೆ. ಆದರೆ ಕೆಲವು ಅಧಿಕಾರಿಗಳು ಖಾಝಿಗಳಿಗೆ ಅಧಿಕಾರ ರದ್ದುಗೊಂಡಿದ್ದು, ಮಸೀದಿ ಕಮಿಟಿಗಳಿಗೆ ಅಧಿಕಾರ ನೀಡಿರುವುದಾಗಿ ತಪ್ಪು ಮಾಹಿತಿ ನೀಡುತ್ತಿರುವ ಕುರಿತು ವಕ್ಫ್‌ ಸಚಿವರು, ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ” ಎಂದರು.

Advertisements

ಖಾಝಿಗಳಿಗೆ ಇರುವ ಅಧಿಕಾರ ಕುರಿತಂತೆ ಕಲ್ಬುರ್ಗಿ ಹೈಕೋರ್ಟಿನಲ್ಲಿ ದೂರು ದಾಖಲಿಸಲಾಗಿತ್ತು. ದೂರಿನ ವಿಚಾರಣೆ ನಡೆಸಿ ಹೈಕೋರ್ಟ್‌ ಆದೇಶ ನೀಡಿದೆ. ಕಲ್ಯಾಣ ಕರ್ನಾಟಕದಲ್ಲಿ ಖಾಝಿಗಳಿಗೆ ಅಧಿಕಾರ ಮುಂದುವರೆಸಿದ್ದು, ಮಸೀದಿ ಕಮಿಟಿಗಳಿಗೆ ಅಧಿಕಾರವಿಲ್ಲ ಎಂದು ಸ್ಪಷ್ಟತೆಯನ್ನು ನೀಡಿದೆ. ವಕ್ಫ್‌ ಇಲಾಖೆಗೆ ಯಾವುದೇ ಅಧಿಕಾರ ಇಲ್ಲದೇ ಇದ್ದರೂ ಮಧ್ಯಪ್ರವೇಶಿಸಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಮೊಹಮ್ಮದ್ ಆದಂ ಖಾನ್ ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಫಲಶೃತಿ | ಬೆಳಗಾವಿ: ಶಾಲಾ ಶೌಚಾಲಯ ಸಮಸ್ಯೆ; ತಾತ್ಕಾಲಿಕ ಪರಿಹಾರ ಕಲ್ಪಿಸಿದ ಅಧಿಕಾರಿಗಳು

ವಕ್ಫ್‌ ಕಾಯ್ದೆ 1995ರಂತೆ ಖಾಝಿಗಳನ್ನು ನೇಮಿಸುವ ಅಧಿಕಾರ ವಕ್ಫ್‌ ಕಮಿಟಿಗೆ ಇಲ್ಲ. ಕಲ್ಯಾಣ ಕರ್ನಾಟಕ ಹೊರತುಪಡಿಸಿ ಉಳಿದ 24 ಜಿಲ್ಲೆಗಳಲ್ಲಿ ಮಾತ್ರ ಖಾಝಿ ಕಾಯ್ದೆ ಸಮಾಪನಗೊಂಡಿದೆ. ದುರುದ್ದೇಶಪೂರ್ವಕವಾಗಿ ಖಾಝಿಗಳ ಸೇವೆ ರದ್ದುಗೊಂಡಿದೆ ಸುಳ್ಳು ಹರಡುವದನ್ನು ನಿಲ್ಲಿಸಬೇಕು. ವಕ್ಫ್‌ ಸಚಿವರು ಕೂಡಲೇ ಸ್ಪಷ್ಟತೆ ನೀಡಬೇಕು. ಒಂದು ತಿಂಗಳೊಳಗೆ ಕ್ರಮವಾಗದೇ ಇದ್ದರೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಖಾಝೀಸ್ ವೆಲ್‌ಫೇರ್ ಅಂಜುಮನ್ ಟ್ರಸ್ಟ್‌ ಅಧ್ಯಕ್ಷ ಖಾಝಿ ಮೀರ್ ಇಬ್ರಾಹಿಂ ಅಲಿ, ಸೈಯದ್ ಜಾಫರ್ ಹುಸೇನ್ ಖಾದ್ರಿ, ಎಂ.ಡಿ.ಅಬ್ದುಲ್ಲಾ ಖಾಝಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಖಾಝಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X