ಶ್ರೀರಂಗಪಟ್ಟಣ | ವಿವಿಧೆಡೆ ಪುನೀತ್ ರಾಜ್‍ಕುಮಾರ್ ಸ್ಮರಣೆ

Date:

Advertisements

ವ್ಯಕ್ತಿ ಸತ್ತ ನಾಲ್ಕು ದಿನಗಳ ನಂತರ ನಾವು ಮರೆಯುತ್ತೇವೆ. ಈ ಕಾಲದಲ್ಲಿ ಮೂರು ವರ್ಷಗಳ ನಂತರವೂ ಪುನೀತ್ ರಾಜ್‍ಕುಮಾರ್ ಅವರನ್ನು ನೆನೆಯುತಿದ್ದೇವೆ. ಅವರು ಮಾಡಿರುವ ಕೆಲಸ, ಅವರನ್ನು ಮರೆಯದಂತೆ ನೆನಪಿನಲ್ಲಿ ಇಟ್ಟಿದೆ. ನಾವು ಕೂಡ ಅವರಂತೆ ಒಳ್ಳೆಯ ಕೆಲಸ ಮಾಡಬೇಕು ಎಂದು ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾ ತಿಳಿಸಿದರು.

ಅವರು ಶ್ರೀರಂಗಪಟ್ಟಣ ತಾಲೂಕು ದರಸಗುಪ್ಪೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಪುನೀತ್ ರಾಜಕುಮಾರ್ ಮೂರನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪುಸ್ತಕ ಪೆನ್ನು ಪೆನ್ಸಿಲ್ ಸಿಹಿ ತಿನಿಸು ನೀಡಲಾಯಿತು.

ಶ್ರೀರಂಗಪಟ್ಟಣದ ಎಸ್‌ಬಿಐ ಬ್ಯಾಂಕಿನ ಮುಂಭಾಗದಲ್ಲಿ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ಪುನೀತ್ ರಾಜಕುಮಾರ್ 3ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪುನೀತ್ ರಾಜಕುಮಾರ್ ಒಳ್ಳೆಯ ಕೆಲಸಗಳನ್ನು ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರು ಸ್ಮರಿಸಿದರು.

Advertisements
WhatsApp Image 2024 10 30 at 7.27.59 AM 1

ದರಸಗುಪ್ಪೆ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿಯರಾದ ಪುಷ್ಪಾ, ಗಿರಿಜಾ, ದರಸಗುಪ್ಪೆ ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರಾದ ಕೃಷ್ಣಪ್ಪಗೌಡ ಮೋಹನ್ ಕುಮಾರ್, (ಮುರಳಿ) ಮಾಜಿ ಅಧ್ಯಕ್ಷರಾದ ಕಡತನಾಳು ಮಾದೇಶ್, ಮಾಜಿ ಉಪಾಧ್ಯಕ್ಷರಾದ ದರಸಗುಪ್ಪೆ, ಶ್ರೀಧರ್, ಕಡತನಾಳು ಶಿವಕುಮಾರ್, ರಾಂಪುರ ವಿಜೇಂದ್ರ (ಪುಟ್ಟು), ರಾಂಪುರ ಸುರೇಶ್ ಹಾಗೂ ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ? ಕೊಲೆ ಪ್ರಕರಣದಲ್ಲಿ ಜಾಮೀನು | ನಟ ದರ್ಶನ್ ಜೈಲಿನಿಂದ ಬಿಡುಗಡೆ

ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ರಾಮಕೃಷ್ಣ, ಪತ್ರಕರ್ತ ಪರಿಸರ ಪ್ರೇಮಿಯಾದ ರಮೇಶ್, ಸ್ನೇಹಜೀವಿ ಸುಧಾಕರ್, ಬಿಜೆಪಿ ಹೇಮಂತ್ ಕುಮಾರ್, ಇನ್ನಿತರರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಶ್ರೀರಂಗಪಟ್ಟಣದ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ಮುಖ್ಯಸ್ಥ ಗೋಬಿ ಹರೀಶ್ ನೇತೃತ್ವ ವಹಿಸಿದರು, ಸ್ಟುಡಿಯೋ ಭೀಮಣ್ಣ, ಮನು, ರಾಘು, ಸೂರಿ ಮತ್ತಿತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X