ಒಡಿಶಾ | ಅಲೆಮಾರಿ ಕುಟುಂಬದ ಐವರ ಬರ್ಬರ ಹತ್ಯೆ; ಐವರ ಅಪಹರಣ

Date:

Advertisements

ಎದುರಾಳಿ ಗುಂಪೊಂದು ಅಲೆಮಾರಿ ಕುಟುಂಬದ ಮೂವರು ಮಹಿಳೆಯರು ಸೇರಿದಂತೆ ಐವರನ್ನು ಬರ್ಬರವಾಗಿ ಹತ್ಯೆ ಮಾಡಿ, ಮತ್ತೆ ಐದು ಮಂದಿಯನ್ನು ಅಪಹರಣ ಮಾಡಿರುವ ಘಟನೆ ಮಂಗಳವಾರ ರಾತ್ರಿ ಒಡಿಶಾದ ಸುಂದರ್‌ಗಢ ಜಿಲ್ಲೆಯ ಸದರ್ ಪೊಲೀಸ್ ವ್ಯಾಪ್ತಿಯ ಕರಮ್‌ಡಿಹಿ ಗ್ರಾಮದ ಬಳಿ ನಡೆದಿದೆ.

ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ನಾಲ್ವರು ಮಕ್ಕಳು ಮತ್ತು ಓರ್ವ ಮಹಿಳೆಯನ್ನು ಅಪಹರಣ ಮಾಡಲಾಗಿದೆ. ಇತರ ನಾಲ್ಕು ಮಕ್ಕಳಿಗೆ ಮತ್ತು ಕುಟುಂಬದ ನಾಲ್ವವರು ಪುರುಷರಿಗೆ ಗಾಯವಾಗಿದೆ. ಎದುರಾಳಿ ತಂಡ ದಾಳಿ ನಡೆಸಿದ ವೇಳೆ ಅಲೆಮಾರಿ ಕುಟುಂಬ ತಂಗಿದ್ದ ಟೆಂಟ್‌ನಲ್ಲಿ ಸುಮಾರು 20 ಮಂದಿ ಇದ್ದರು ಎಂದು ವರದಿಯಾಗಿದೆ.

ಸದ್ಯ ಪೊಲೀಸರು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಹಾಗೆಯೇ ಅಪಹರಣಕ್ಕೊಳಗಾದವರ ರಕ್ಷಣೆಗೆ ಭಾರೀ ಶೋಧ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬೀದರ್ | ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ; ಮೂಲಸೌಕರ್ಯ ಒದಗಿಸಲು ಅಲೆಮಾರಿಗಳ ಆಗ್ರಹ

ಘಟನೆಯ ಸ್ವಲ್ಪ ಸಮಯದ ನಂತರ ಪೊಲೀಸ್ ಡಿಐಜಿ (ಪಶ್ಚಿಮ ಶ್ರೇಣಿ) ಬಿರ್ಜೇಶ್ ಕುಮಾರ್ ರೈ ಮತ್ತು ಸುಂದರ್‌ಗಢ ಎಸ್‌ಪಿ ಪ್ರತ್ಯೂಷ್ ದಿವಾಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಹಾಗೆಯೇ ಬುಧವಾರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಗಾಯಾಳುಗಳಲ್ಲಿ ಒಬ್ಬರಾದ ಅವಿನಾಶ್ ಪವಾರ್ ನೀಡಿದ ದೂರಿನ ಪ್ರಕಾರ ರಾತ್ರಿ ಎಲ್ಲರು ನಿದ್ರಿಸುತ್ತಿದ್ದಾಗ ದಾಳಿ ನಡೆದಿದೆ. ವಿವಾಹೇತರ ಸಂಬಂಧವೇ ಈ ದಾಳಿಗೆ ಕಾರಣ ಎಂದು ಪವಾರ್ ಪೊಲೀಸರಿಗೆ ತಿಳಿಸಿದ್ದಾರೆ. ಹಾಗೆಯೇ ಈ ಅಪರಾಧದಲ್ಲಿ ತಮ್ಮ ಸೋದರ ಮಾವ ಭಾಗಿಯಾಗಿರುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ಅವಿನಾಶ್ ಪವಾರ್ ಅವರ ಎರಡನೇ ಪತ್ನಿ, ಇಬ್ಬರು ಮಕ್ಕಳು ಮತ್ತು ಕುಟುಂಬದ ಇನ್ನಿಬ್ಬರು ಮಕ್ಕಳ ಅಪಹರಣ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X