ಹನೂರು ತಾಲೂಕಿನಲ್ಲಿರುವ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2024 ಅಕ್ಟೋಬರ್ 29ರಿಂದ ನವೆಂಬರ್ 2ರವರೆಗೆ ಜರುಗಲಿರುವ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಚಾಮರಾಜನಗರದಲ್ಲಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತಾಧಿಗಳು ಪ್ರತಿ ವರ್ಷ ಸೇರುತ್ತಾರೆ. ವಾಹನ ಸಂಚಾರಕ್ಕೆ ಅಡಚಣೆ, ಅಪಘಾತಗಳು ಉಂಟಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಸಂಭವವಿರುತ್ತದೆ. ಈ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಕೌದಳ್ಳಿ ಗ್ರಾಮದ ಪ್ರಕಾಶ್ ಗಾರ್ಡ್‌ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ಮಾದರಿಯ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು (ಆಟೋ ರಿಕ್ಷಾ ಮತ್ತು ಗೂಡ್ಸ್ ವಾಹನಗಳು ಸೇರಿದಂತೆ) ಪ್ರವೇಶವನ್ನು ದಿನಾಂಕ 29-10-2024 ರಿಂದ 02-11-2024 ರವರೆಗೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಾಹನ ಪಾರ್ಕಿಂಗ್‌ಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮತ್ತು ದ್ವಿಚಕ್ರ ಮತ್ತು ಆಟೋರಿಕ್ಷಾ ವಾಹನ ಸವಾರರು ನಿಲುಗಡೆ ಸ್ಥಳದಿಂದ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಲು ಬೇಕಾದ ಸಾರಿಗೆ ಸೌಲಭ್ಯವನ್ನು ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಉಲ್ಲೇಖ(1)ರ ಪತ್ರದಲ್ಲಿ ಪೊಲೀಸ್ ಅಧೀಕ್ಷಕರು, ಚಾಮರಾಜನಗರ ಜಿಲ್ಲೆ, ಹಾಗೂ ಉಲ್ಲೇಖ(2)ರ ಪತ್ರದಲ್ಲಿ ಕಾರ್ಯದರ್ಶಿಗಳು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಕ್ಷೇತ್ರ ಪ್ರಾಧಿಕಾರ ಮಲೈ ಮಹದೇಶ್ವರ ಬೆಟ್ಟ ಹನೂರು ತಾಲೂಕು ಇವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಇದನ್ನು ಓದಿದ್ದೀರಾ? ಈ ದಿನ ಫಲಶೃತಿ | ಬೆಳಗಾವಿ: ಶಾಲಾ ಶೌಚಾಲಯ ಸಮಸ್ಯೆ; ತಾತ್ಕಾಲಿಕ ಪರಿಹಾರ ಕಲ್ಪಿಸಿದ ಅಧಿಕಾರಿಗಳು
ಮಲೆ ಮಹದೇಶ್ವರ ಬೆಟ್ಟದ ರಸ್ತೆಯು ಅರಣ್ಯ ಪ್ರದೇಶ ಹಾಗೂ ತುಂಬಾ ಕಡಿದಾದ ತಿರುವುಗಳಿಂದ ಕೂಡಿದ್ದು ವಾಹನ ದಟ್ಟಣೆ ಹೆಚ್ಚಾಗುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸದರಿ ರಸ್ತೆಯ ಸಂಚಾರದಲ್ಲಿ ವಾಹನಗಳ ಸಂಚಾರ ನಿಷೇಧಿಸಿ, ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988ರ ಸೆಕ್ಷನ್ 115, ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿ 1989ರ ನಿಯಮ 221-ಎ(5)ರ ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ 1960ರ ಸೆಕ್ಷನ್ 3ರ ಪ್ರಕಾರ ಮುಂಜಾಗೃತಾ ಕ್ರಮವಾಗಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
