ಬೆಂ.ಗ್ರಾಮಾಂತರ | ರಾತ್ರಿ 8 – 10ರವರೆಗೆ ಮಾತ್ರ ಪಟಾಕಿ ಹಚ್ಚಲು ಅವಕಾಶ : ಡಿಸಿ ಡಾ.ಎನ್.‌ಶಿವಶಂಕರ

Date:

Advertisements

ಸಾರ್ವಜನಿಕ ಆಸ್ತಿ, ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಹಾಗೂ ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ರಾತ್ರಿ 8-10ಗಂಟೆವರೆಗೆ ಮಾತ್ರ ಪಟಾಕಿ ಹಚ್ಚಬಹುದು ಎಂದು ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ತಿಳಿಸಿದ್ದಾರೆ.

ಸಾರ್ವಜನಿಕರು ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದು. ಸರ್ವೋಚ್ಛ ನ್ಯಾಯಾಲಯದ ‌ನಿರ್ದೇಶನದಂತೆ ದೀಪಾವಳಿ ಹಬ್ಬದ ದಿನದಂದು ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಹಚ್ಚಲು ಅವಕಾಶವಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.

ಬೆಳಗಿನ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ, ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು.

Advertisements

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಲು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೀಸಲಾತಿಗೇ ಕುತ್ತು ಬಂದಿರುವಾಗ, ಒಳಮೀಸಲಿನ ನಿಜವನ್ನು ಇನ್ನೆಷ್ಟು ಕಾಲ ಮುಂದೂಡುತ್ತೀರಿ?

ದೀಪಾವಳಿ ಹಬ್ಬವನ್ನು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಬಹುದಾಗಿದೆ. ಹಬ್ಬದ ಸಮಯದಲ್ಲಿ ಹಸಿರು ಪಟಾಕಿಗಳನ್ನು ಬಳಸಿ ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X