ಮೊಟ್ಟೆಯಿಂದ ತಯಾರಿಸುವ ಮಯೋನಿಸ್ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟವನ್ನು ಒಂದು ವರ್ಷದವರೆಗೆ ನಿಷೇಧಿಸಿ
ತೆಲಂಗಾಣ ಸರ್ಕಾರ ಆದೇಶಿಸಿದೆ. ಮಯೋನಿಸ್ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಸಾರ್ವಜನಿಕರಿಂದ ಬಂದ ದೂರಿನ ಆಧಾರದ ಮೇಲೆ ಪರಿಶೀಲನೆ ನಡೆಸಿದ್ದು, ಈ ವೇಳೆ ಮೊಟ್ಟೆಯಿಂದ ಮಾಡುವ ಮಯೋನಿಸ್‌ನಲ್ಲಿ ವಿಷಾಹಾರಕ್ಕೆ ಕಾರಣವಾಗುವ ಅಂಶಗಳು ಕಂಡುಬಂದಿದೆ. ಆದ್ದರಿಂದ ತಕ್ಷಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ರಾಜ್ಯ ಆಹಾರ ಸುರಕ್ಷತಾ ಆಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೀಸಲಾತಿಗೇ ಕುತ್ತು ಬಂದಿರುವಾಗ, ಒಳಮೀಸಲಿನ ನಿಜವನ್ನು ಇನ್ನೆಷ್ಟು ಕಾಲ ಮುಂದೂಡುತ್ತೀರಿ?
ಮೊಟ್ಟೆಯ ಹಳದಿ ಭಾಗವನ್ನು ಎಣ್ಣೆಯೊಂದಿಗೆ ಮಿಶ್ರಣಮಾಡಿ ಮಯೋನಿಸ್ ಅನ್ನು ತಯಾರಿಸಲಾಗುತ್ತದೆ. ಸುವಾಸನೆಗೆ ವಿನೇಗರ್ ಅಥವಾ ನಿಂಬೆ ಹಣ್ಣನ್ನು ಬಳಸಲಾಗುತ್ತದೆ. ಸಾಮಾನ್ಯವಾಗಿ ಇದನ್ನು ಸ್ಯಾಂಡ್‌ವಿಚ್, ಸಲಾಡ್, ಶವರ್ಮ ಸೇರಿದಂತೆ ವಿವಿಧ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ.