ಉಡುಪಿ | ಕೊಂಕಣಿ ಜಾನಪದ ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು: ವಂ. ಡೆನಿಸ್ ಡೇಸಾ

Date:

Advertisements

ನಮ್ಮಲ್ಲಿರುವ ಕೊಂಕಣಿ ಸಂಪ್ರದಾಯ ಜಾನಪದೀಯ ಸಂಸ್ಕೃತಿಗಳು ವಿಶಿಷ್ಠ ಮತ್ತು ವೈವಿಧ್ಯಮಯವಾಗಿದ್ದು, ಅದನ್ನು ಉಳಿಸಿ ಪೋಷಿಸುವ ಅಗತ್ಯವಿದೆ ಎಂದು ಉಡುಪಿಯ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ವಂ. ಡೆನಿಸ್ ಡೇಸಾ ಹೇಳಿದರು.

ಅವರು ಗುರುವಾರ ತೊಟ್ಟಂ ಚರ್ಚಿನ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಯುವ ಕಥೊಲಿಕ ವಿದ್ಯಾರ್ಥಿ ಸಂಚಾಲನ ಹಾಗೂ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ವೈಸಿಎಸ್ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಕೊಂಕಣಿ ಜಾನಪದ ಹಾಡು ಹಾಗೂ ವಾದ್ಯಗಳ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಪಾಶ್ಚ್ಯಾತೀಕರಣವಾಗುತ್ತಿರುವ ಇಂದಿನ ಸಮಾಜದಲ್ಲಿ ಯುವಕರು ಊರಿನಿಂದ ವಲಸೆ ಹೋಗುತ್ತಿದ್ದು, ನಮ್ಮ ಸಂಸ್ಕೃತಿಯನ್ನು ಮರೆತು ವಿದೇಶಿ ಸಂಸ್ಕೃತಿಯ ದಾಸರಾಗುತ್ತಿರುವುದು ಖೇದಕರ ಸಂಗತಿಯಾಗಿದೆ. ನಾವು ಎಲ್ಲೇ ಇದ್ದರೂ ಕೂಡ ನಮ್ಮ ನೆಲ, ಭಾಷೆಯನ್ನು ಪ್ರೀತಿಸುವುದರೊಂದಿಗೆ ನಮ್ಮ ಸಂಸ್ಕೃತಿಯನ್ನು ಉಳಿಕೊಳ್ಳಬೇಕು. ದೀಪಾವಳಿಯ ಈ ಪರ್ವಕಾಲದಲ್ಲಿ ಕೊಂಕಣಿ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಕಾರ್ಯಾಗಾರ ಅರ್ಥಗರ್ಭಿತವಾದುದು. ಈ ಮೂಲಕ ನಮ್ಮ ಸಂಸ್ಕೃತಿಯನ್ನು ಬೆಳೆಸಿ ಪೋಷಿಸುವುದರೊಂದಿಗೆ ಮುಂದಿನ ಜನಾಂಗಕ್ಕೆ ಇದರ ಅರಿವು ಇರುವಂತೆ ಎಚ್ಚರಿಕೆ ವಹಿಸುವ ಅಗತ್ಯತೆ ಇದೆ. ನಾವು ನಮ್ಮ ಹಳೆಯ ಕೊಂಕಣಿ ಜಾನಪದ ಸಂಸ್ಕೃತಿ ಉಳಿಸುವುದರೊಂದಿಗೆ ಕಲಾವಿದರನ್ನು ಕೂಡ ಗುರುತಿಸುವ ಕಾರ್ಯ ನಡೆಯಬೇಕು ಈ ಮೂಲಕ ನಮ್ಮ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

Advertisements

ಕೊಂಕಣಿ ಜಾನಪದ ಹಾಡು ಹಾಗೂ ವಾದ್ಯಗಳ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಕೊಂಕಣ್ ಮೈನಾ ಬಿರುದಾಂಕಿತರಾದ ಹೆಸರಾಂತ ಗಾಯಕ ದಿ. ವಿಲ್ಫೀ ರೆಬಿಂಬಸ್ ಅವರ ಪತ್ನಿ ಮೀನಾ ರೆಬಿಂಬಸ್ ಕಳಸಿಗೆಗೆ ಅಕ್ಕಿಯನ್ನು ತುಂಬಿಸುವುದರ ಮೂಲಕ ಉದ್ಘಾಟಿಸಿದರು.

ತೊಟ್ಟಂ ಘಟಕದ ವೈಸಿಎಸ್ ಸದಸ್ಯರು ಕೊಂಕಣಿ ಜಾನಪದ ವಾದ್ಯ ಗುಮಟೆಯ ಮೂಲಕ ಸಂಗೀತ ಪ್ರದರ್ಶನ ಮಾಡಿದರು. ಕ್ಯಾಥರಿನ್ ರೊಡ್ರಿಗಸ್, ಡೆಲ್ಟನ್ ಲೋಬೊ, ಜಾಸ್ಮೀನ್ ಜೆನಿಫರ್ ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಕಾರ್ಯಕ್ರಮದಲ್ಲಿ ಧರ್ಮಪ್ರಾಂತ್ಯದ ಸುಮಾರು 500ಕ್ಕೂ ಅಧಿಕ ಯುವಜನರು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ? ವಕ್ಫ್‌ ಆಸ್ತಿ ವಿವಾದ | ಫಲಿಸಿತು ಬಿಜೆಪಿ (ಕು)ತಂತ್ರ; ಕಡಕೋಳದಲ್ಲಿ ಭುಗಿಲೆದ್ದ ಕೋಮು ಗಲಭೆ

ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಯುವ ನಿರ್ದೇಶಕರಾದ ವಂ. ಸ್ಟೀಫನ್ ಫೆರ್ನಾಂಡಿಸ್, ವೈಸಿಎಸ್ ಕೇಂದ್ರಿಯ ಸಚೇತಕಿ ಕವಿತಾ ಡಿಸಿಲ್ವಾ, ತೊಟ್ಟಂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸುನೀಲ್ ಫೆರ್ನಾಂಡಿಸ್, ತೊಟ್ಟಂ ವೈಸಿಎಸ್ ಅಧ್ಯಕ್ಷರಾದ ಜೋಶ್ವಾ ಫೆರ್ನಾಂಡಿಸ್, ಸಚೇತಕಿ ಸುನೀತಾ ಮಾರ್ಟಿಸ್, ಪ್ರೀಶಲ್ ಡಿಮೆಲ್ಲೊ ಉಪಸ್ಥಿತರಿದ್ದರು. ತೊಟ್ಟಂ ಘಟಕದ ಸಚೇತಕಿ ಲವೀನಾ ಆರೋಜಾ ಸ್ವಾಗತಿಸಿ, ಲೆಸ್ಲಿ ಆರೋಝಾ ಕಾರ್ಯಕ್ರಮ ಸಂಘಟಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X