ಒಳಮೀಸಲಾತಿ | ಆಯೋಗ ರಚನೆ ಹಿಂದೆ ಕಾಲಹರಣ ತಂತ್ರವಿಲ್ಲ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Date:

Advertisements

ಒಳ ಮೀಸಲಾತಿ ನೀಡುವುದು ಸಂವಿಧಾನ ಬದ್ಧವಾದ ಕ್ರಮ ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ ನೀಡದಂತೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂಬ ಉದ್ದೇಶದಿಂದ ಸರ್ಕಾರ ಆಯೋಗ ಸರ್ಕಾರ ರಚಿಸಿದ್ದು, ಇದರಲ್ಲಿ ಯಾವುದೇ ವಿಳಂಬ ನೀತಿ ಅಥವಾ ಕಾಲಹರಣ ತಂತ್ರ ಇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ನ್ಯಾಯದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಕಾರ್ಯ ನಿರ್ವಹಿಸಲಿದೆ. ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು ಮೂರು ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

ರಾಜ್ಯ ಹೈಕೋರ್ಟ್‌ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಅಕ್ಟ್‌ 1952 ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಸದರಿ ಆಯೋಗವು ಎರಡು ತಿಂಗಳ ಒಳಗಾಗಿ ವರದಿ ಸಲ್ಲಿಸುವ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್‌ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

Advertisements

ತೆಲಂಗಾಣ ಸರ್ಕಾರ ಸಹ ಒಳ ಮೀಸಲಾತಿ ಜಾರಿ ಸಂಬಂಧ ಈಗಾಗಲೇ ಇದೇ ಮಾದರಿಯಲ್ಲಿ ಒಂದು ಆಯೋಗ ರಚನೆ ಮಾಡಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ ಅಂಶಗಳ ಅಗತ್ಯವಿರುತ್ತದೆ. ಈ ಅಂಕಿ ಅಂಶಗಳನ್ನು ವೈಜ್ಞಾನಿಕವಾಗಿ ನಿರ್ಧರಿಸಲು ರಾಜ್ಯ ಸರ್ಕಾರವು ಆಯೋಗವನ್ನು ರಚನೆ ಮಾಡಲು ನಿರ್ಧರಿಸಿದೆ. ಆಯೋಗವು ನಿಗಧಿತ ಗಡುವಿನೊಳಗೆ ವರದಿಯನ್ನು ಸಲ್ಲಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರ್ಕಾರವು ತೆಗೆದುಕೊಳ್ಳಲಿದೆ. ಆಯೋಗದ ವರದಿ ಬಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X