ಏರುಗತಿಯಲ್ಲಿ ರಾಜ್ಯದ ಆರ್ಥಿಕತೆ: ಆದಾಯ ಹೆಚ್ಚಳ – ಮೂಲಸೌಕರ್ಯ ಕ್ಷೇತ್ರದಲ್ಲಿ ಭಾರೀ ಹೂಡಿಕೆ

Date:

Advertisements

ಪ್ರಸ್ತುತ ಹಣಕಾಸು ಸಾಲಿನ ಆರಂಭಿಕ ಏಳು ತಿಂಗಳ ಅವಧಿಯಲ್ಲಿ ಕರ್ನಾಟಕ ರಾಜ್ಯ ಗಣನೀಯ ಆರ್ಥಿಕ ಪ್ರಗತಿ ಸಾಧಿಸಿದ್ದು, 1,03,683 ಕೋಟಿ ರೂ. ಆದಾಯ ಸಂಗ್ರಹ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿನ ಆರ್ಥಿಕತೆಯಲ್ಲಿ ಏರಿಕೆ ಮತ್ತು ಆದಾಯದಲ್ಲಿ ಹೆಚ್ಛಳವಾಗಿದೆ. ಜೊತೆಗೆ, ಮೌಲಸೌಕರ್ಯ ಕ್ಷೇತ್ರದಲ್ಲಿನ ಹೂಡಿಕೆಯೂ ಹೆಚ್ಛಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆರ್ಥಿಕ ಅಭಿವೃದ್ಧಿ ಬಗ್ಗೆ ಸಿದ್ದರಾಮಯ್ಯ ನೀಡಿರುವ ವಿವರಣೆ ಇಲ್ಲಿದೆ;

ಪ್ರಸ್ತುತ ಹಣಕಾಸು ವರ್ಷದಲ್ಲಿ 1,95,525 ಕೋಟಿ ರೂ. ಆದಾಯ ಸಂಗ್ರಹ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಶೇ.53ರಷ್ಟು (1,03,683 ಕೋಟಿ ರೂ.) ಗುರಿಯನ್ನು ಸಾಧಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯ ಆದಾಯ ಸಂಗ್ರಹದಲ್ಲಿ ಶೇ.11.2ರಷ್ಟು ಪ್ರಗತಿಯನ್ನು ದಾಖಲಿಸಿದ್ದು, ಗ್ರಾಹಕರ ಬೇಡಿಕೆ ಹೆಚ್ಚಳ ಮತ್ತು ಆರ್ಥಿಕ ಚಟುವಟಿಕೆಗಳು ಚುರುಕುಗೊಂಡಿರುವುದನ್ನು ಸ್ಪಷ್ಟಪಡಿಸಿದೆ.

Advertisements

ಎಲ್ಲ ವಲಯಗಳಲ್ಲಿ ಆದಾಯ ಸಂಗ್ರಹದಲ್ಲಿ ಹೆಚ್ಚಳ

ಹೂಡಿಕೆ


ಎಲ್ಲ ಪ್ರಮುಖ ಆದಾಯ ಸಂಗ್ರಹ ವಲಯಗಳಲ್ಲಿ ಕರ್ನಾಟಕ ಈ ಅವಧಿಯಲ್ಲಿ ಉತ್ತಮ ಸಾಧನೆ ಮಾಡಿದೆ. ಸರ್ಕಾರದ ಇತ್ತೀಚಿನ ಕೆಲವು ಸುಧಾರಣಾ ಕ್ರಮಗಳಿಂದಾಗಿ ಮುದ್ರಾಂಕ ಮತ್ತು ಅಬಕಾರಿ ತೆರಿಗೆ ಸಂಗ್ರಹ ಹೆಚ್ಚಳವಾಗಿದೆ. ಗಣಿಗಾರಿಕೆ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಮುಂದುವರೆದಿದ್ದ ತೊಡಕುಗಳನ್ನು ನಿವಾರಿಸುವ ಮೂಲಕ ಈ ವಲಯದಲ್ಲಿ ನಿರೀಕ್ಷೆಗೂ ಹೆಚ್ಚಿನ ಸಾಧನೆ ಸಾಧ್ಯವಾಗಿದೆ.

ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೇ ಸ್ಥಾನ

ಕರ್ನಾಟಕ ಸರ್ಕಾರದ ಉದ್ಯಮ ಸ್ನೇಹಿ ನೀತಿಗಳು ಹಾಗೂ ಉತ್ತಮ ಆರ್ಥಿಕ ನೀತಿಗಳಿಂದಾಗಿ ವಿದೇಶಿ ಬಂಡವಾಳ ಹೂಡಿಕೆಯಲ್ಲೂ ಹೆಚ್ಚಿನ ಪ್ರಗತಿ ಸಾಧ್ಯವಾಗಿದೆ. 2024-25 ರ ಪ್ರಥಮ ತ್ರೈಮಾಸಿಕದಲ್ಲಿ  ರಾಜ್ಯ 2.2 ಬಿಲಿಯನ್‌ ರೂ. ನೇರ ವಿದೇಶಿ ಬಂಡವಾಳ ಆಕರ್ಷಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಗುಜರಾತ್‌ ರಾಜ್ಯವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಏರಿದೆ. 

ಬಜೆಟ್‌ ಅನುದಾನ ವೆಚ್ಚ ಸಾಧನೆ

ರಾಜ್ಯ ಅಕ್ಟೋಬರ್‌ ಅಂತ್ಯದ ವೇಳೆಗೆ ಬಜೆಟ್‌ ಅನುದಾನದ ಶೇ.46 ರಷ್ಟು ವೆಚ್ಚ ಮಾಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.42 ರಷ್ಟು ವೆಚ್ಚ ದಾಖಲಾಗಿತ್ತು. ಬಜೆಟ್‌ ಅಂದಾಜಿಗಿಂತ ಬಂಡವಾಳ ವೆಚ್ಚ ಸಹ ಶೇ.24.7ರಿಂದ ಶೇ.29 ಕ್ಕೆ ಏರಿಕೆಯಾಗಿದೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ರಾಜ್ಯದ ಬದ್ಧತೆಯನ್ನು ಇದು ತೋರಿಸುತ್ತದೆ.

ಧೀರ್ಘಕಾಲೀನ ಅಭಿವೃದ್ಧಿಗೆ ಮೂಲಸೌಕರ್ಯಗಳ ಮೇಲೆ ಹೂಡಿಕೆ

ಬಂಡವಾಳ ಹೂಡಿಕೆಗಳ ಮೇಲೆ ಹೆಚ್ಚಿನ ಒತ್ತು ನೀಡುವ ಮೂಲಕ ರಾಜ್ಯ ಜಿಎಸ್‌ಡಿಪಿ ಅಭಿವೃದ್ದಿ ದರವನ್ನು ಶೇ.14 ರಷ್ಟು ಸಾಧಿಸುವ ಗುರಿಯನ್ನು ಹೊಂದಿದೆ. ಪ್ರಮುಖ ಯೋಜನೆಗಳಿಗೆ ರೂ.16,750 ಕೋಟಿ ಸಹಾಯ ಪಡೆಯುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್‌ ಮತ್ತು ಏಷ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಜತೆ ಮಾತುಕತೆ ನಡೆಸುತ್ತಿದೆ. ಇದರಲ್ಲಿ ಬೆಂಗಳೂರು ವಿಪತ್ತು ನಿರ್ವಹಣೆಗೆ ರೂ. 3500 ಕೋಟಿ, ನಗರ ನೀರು ಸರಬರಾಜು ಆಧುನೀಕರಣಕ್ಕೆ ರೂ.1200 ಕೋಟಿ, ಕರಾವಳಿ ಕರ್ನಾಟಕದಲ್ಲಿ ಸಾಗರ ಸಂಬಂಧಿ ಆರ್ಥಿಕತೆ ಅಭಿವೃದ್ಧಿಗೆ ರೂ.600 ಕೋಟಿ, ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ ರೂ.3650 ಕೋಟಿ, ಹವಾಮಾನ ಪೂರಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರೂ.3600, ಸರ್ಕಾರಿ ಶಾಲೆಗಳ ಮೂಲಸೌಕರ್ಯಕ್ಕಾಗಿ ರೂ.2800 ಕೋಟಿ, ಸಾರ್ವಜನಿಕ ಸಾರಿಗೆಗೆ ಇಲೆಕ್ಟ್ರಿಕ್‌ ಬಸ್‌ಗಳಿಗಾಗಿ ರೂ.1400 ಸೇರಿದೆ.

ಈ ವರದಿ ಓದಿದ್ದೀರಾ?: ಕರ್ನಾಟಕಕ್ಕೆ ತೆರಿಗೆ ಅನ್ಯಾಯ | ಕೇಂದ್ರ ಸಮರ್ಥಿಸುವ ಆರ್‌ ಅಶೋಕ್‌, ನಾಚಿಕೆ ಆಗಲ್ವಾ?

ಬೆಂಗಳೂರು ನಗರದಲ್ಲಿ ರೂ.1,31,500 ಕೋಟಿ ಮೊತ್ತದ ಮೂಲಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ನಗರದ ಚಿತ್ರಣ ಬದಲಾಗಲಿದೆ. ಇವುಗಳಲ್ಲಿ ರೂ.12ಸಾವಿರ ಕೋಟಿ ವೆಚ್ಚದಲ್ಲಿ 100 ಕಿಮೀ ಎತ್ತರಿಸಿದ ಕಾರಿಡಾರ್‌, ರೂ.40 ಸಾವಿರ ಕೋಟಿ ವೆಚ್ಚದಲ್ಲಿ ಮೆಟ್ರೋ ಮೂರನೆ ಹಂತದ ವಿಸ್ತರಣೆ (80ಕಿಮಿ), ರೂ.9ಸಾವಿರ ಕೋಟಿ ವೆಚ್ಚದಲ್ಲಿ ಡಬಲ್ ಡೆಕ್ಕರ್‌ ಮೆಟ್ರೋ ಹಳಿಗಳು, ರೂ.40 ಸಾವಿರ ಕೋಟಿ ವೆಚ್ಚದಲ್ಲಿ 40ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಾಣ, ರೂ. 3ಸಾವಿರ ಕೋಟಿ ವೆಚ್ಚದಲ್ಲಿ ಪೆರಿಪೆರಲ್‌ ರಸ್ತೆ ಜಾಲ, ರೂ.500 ಕೋಟಿ ವೆಚ್ಚದಲ್ಲಿ ಸ್ಕೈಡೆಕ್‌ ಯೋಜನೆ ಮತ್ತು ರೂ.27 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ ಯೋಜನೆ ಸೇರಿವೆ.

ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ

ಪ್ರಸ್ತುತ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಜೆಟ್‌ನಲ್ಲಿ ಘೋಷಿಸಿರುವ ರೂ.52,009 ಕೋಟಿ ಪೈಕಿ ಈಗಾಗಲೇ ರೂ.24,235 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗಾಗಿ ಯೋಜನೆಗಳ ಲಾಭ ತಲುಪುವಂತಾಗಲು ಇ ಆಡಳಿತ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ.

ಕಲ್ಯಾಣ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ನಡುವೆ ಸಮತೋಲನ

ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಬಂಡವಾಳ ಹೂಡಿಕೆಗಳ ನಡುವೆ ಸಮತೋಲನ ಸಾಧಿಸುವ ಮೂಲಕ ಕರ್ನಾಟಕ ರಾಜ್ಯ ಸುಸ್ಥಿರ ಅಭಿವೃದ್ಧಿಯ ಹೊಸ ಮಾದರಿಯನ್ನು ಪರಿಚಯಿಸಿದೆ. ಮೂಲಸೌಕರ್ಯ ಅಭಿವೃದ್ದಿ, ಆರ್ಥಿಕ ಸುಧಾರಣೆಗಳು, ಎಲ್ಲರನ್ನು ಒಳಗೊಂಡ ಅಭಿವೃದ್ಧಿಯನ್ನು ಸಾಧಿಸುವ ಗುರಿಯನ್ನು ಹೊಂದುವ ಮೂಲಕ ರಾಜ್ಯ ದೂರಗಾಮಿ ಆರ್ಥಿಕ ಅಭಿವೃದ್ಧಿ ಮತ್ತು ಹಣಕಾಸು ನಿರ್ವಹಣೆಯಲ್ಲಿ ಮುಂಚೂಣಿಗೆ ಬರಲು ಸಾಧ್ಯವಾಗಿದೆ.

ಈ ಸಮತೋಲಿತ ಅಭಿವೃದ್ದಿ ಮಾದರಿಯಿಂದಾಗಿ ಜನರ ಜೀವನ ಗುಣಮಟ್ಟ ಸುಧಾರಿಸಲು ಸಾಧ್ಯವಾಗಿದೆ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಆವಿಷ್ಕಾರ ಕ್ಷೇತ್ರದಲ್ಲಿ ತನ್ನ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಸಾಧ್ಯವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕನ್ನಡ ನಾಡಿನಲ್ಲಿ ಹುಟ್ಟಿ ಬೆಳೆದು ಭವಿಷ್ಯ ಕಟ್ಟಿಕೊಂಡು ತಿಂದುಂಡು ಕೊಬ್ಬಿದ ಕೆಲವು,,ನಾರ್ಥಿ ಜುಮ್ಲಾಗಳಿಗೆ ಬೌದ್ಧಿಕ ಗುಲಾಮರಾಗಿರುವ ರಾಜಕೀಯ ಪುಡಾರಿಗಳು ಆತ್ಮಸಾಕ್ಷಿಯನ್ನು ಒಮ್ಮೆ ಕೇಳಿಕೊಳ್ಳಲಿ,,, ತಮ್ಮ ರಾಜಕೀಯ ತೆವಲಿಗೆ ರಾಜ್ಯದ ಬಗ್ಗೆ ಅಪಪ್ರಚಾರ ಮಾಡುವ ನಾಡದ್ರೋಹಿಗಳು,,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X