ಉತ್ತರ ಪ್ರದೇಶದ ಮುಜಾರಿಯಾ ಪ್ರದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಟ್ರಾಕ್ಟರ್‌ಗೆ ಟೆಂಪೋ ಡಿಕ್ಕಿ ಹೊಡೆದು ಈ ಸಾವು ನೋವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ನೋಯ್ಡಾದಲ್ಲಿ ತರಕಾರಿ ಮಾರಾಟಗಾರರಾಗಿ ಕೆಲಸ ಮಾಡುತ್ತಿದ್ದ ಸಂತ್ರಸ್ತರು ದೀಪಾವಳಿ ಹಬ್ಬ ಆಚರಣೆಗಾಗಿ ಮೂರು ಚಕ್ರಗಳ ಲೋಡರ್ ಟೆಂಪೋದಲ್ಲಿ ತಮ್ಮ ಮನೆಗೆ ತೆರಳುತ್ತಿದ್ದಾರೆ ಈ ದುರ್ಘಟನೆ ಸಂಭವಿಸಿದೆ.
ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ದುರ್ಗಾ ಪೂಜೆ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎನ್‌ಕೌಂಟರ್; ಬಂಧನ
ವೇಗವಾಗಿ ಬಂದ ಟ್ರಾಕ್ಟರ್ ಟೆಂಪೋಗೆ ಡಿಕ್ಕಿ ಹೊಡೆದಿದ್ದು, ಸ್ವಲ್ಪ ಸಮಯದ ನಂತರ, ಕಾರೊಂದು ಟೆಂಪೋಗೆ ಡಿಕ್ಕಿ ಹೊಡೆದಿದೆ. ಇನ್ನು ಐವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಮಿರ್ಜಾಪುರದ ಅತುಲ್ (31), ಬರೇಲಿಯ ಕನ್ನಯ್ಯ (35), ಅವರ ಪತ್ನಿ ಕುಸುಮ್ (30), ಅವರ ಮಕ್ಕಳಾದ ಕಾರ್ತಿಕ್ (8) ಮತ್ತು ಶೀನು (5) ಎಂದು ಗುರುತಿಸಲಾಗಿದೆ. ಇನ್ನೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.
ಅಪಘಾತವಾಗುತ್ತಿದ್ದಂತೆ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಸದ್ಯ ಆತನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ.
