ಮೈಸೂರು | ಯಾವುದೇ ಕಾಯಿಲೆಗೆ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವುದು ಉತ್ತಮ: ಕೆ ಎಂ ಗಾಯತ್ರಿ

Date:

Advertisements

ಯಾವುದೇ ಕಾಯಿಲೆಗೆ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆಯನ್ನು ಪಡೆದುಕೊಳ್ಳುವುದು ಉತ್ತಮ ಎಂದು ಮೈಸೂರು ಜಿಲ್ಲಾ ಪಂಚಾಯತ್‌ನ ಸಿಇಒ ಕೆ ಎಂ ಗಾಯತ್ರಿ ಸಲಹೆ ನೀಡಿದರು.

ಮೈಸೂರು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ವತಿಯಿಂದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಎಷ್ಟೋ ಜನರು ಮುಜುಗರದಿಂದ ತಮ್ಮಲ್ಲಿರುವ ಸಮಸ್ಯೆಗಳನ್ನು ಮುಚ್ಚಿಟ್ಟು ವೈದ್ಯರ ಬಳಿ ಹೋಗಲು ಹಿಂಜರಿಯುತ್ತಾರೆ. ಇದರಿಂದ ಮುಂದೆ ಆ ವ್ಯಕ್ತಿಗೆ ದೊಡ್ಡ ಅನಾಹುತಗಳು ಎದುರಾಗುವ ಸಂದರ್ಭಗಳು ಬರಬಹುದು. ಆದ್ದರಿಂದ ಸಾರ್ವಜನಿಕರಾಗಲಿ, ಅಧಿಕಾರಿಗಳಾಗಲೀ ಯಾವುದೇ ಮುಜುಗರ ಪಡದೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬೇಕ’ ಎಂದು ಹೇಳಿದರು.

Advertisements

ಪ್ರಸ್ತುತ ದಿನಗಳಲ್ಲಿ ಯಾವುದೇ ಒಬ್ಬ ವ್ಯಕ್ತಿಯ ಆರೋಗ್ಯದಲ್ಲಿ ಆಗುವ ಸಣ್ಣ ಬದಲಾವಣೆಯು ಮುಂದೆ ಆತನನ್ನು ದೊಡ್ಡ ಕಾಯಿಲೆಗೆ ಗುರಿ ಮಾಡುತ್ತದೆ. ಹಾಗಾಗಿ ಯಾವುದೇ ಕಾಯಿಲೆಗೆ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆಯನ್ನು ಪಡೆದುಕೊಳ್ಳುವುದು ಉತ್ತಮ ಎಂದು ಕೆ ಎಂ ಗಾಯತ್ರಿ ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಪಿ ಕುಮಾರಸ್ವಾಮಿ ಮಾತನಾಡಿ, ಆರೋಗ್ಯ ಇಲಾಖೆಯು ಪ್ರಮುಖ ಇಲಾಖೆಗಳಲ್ಲಿ ಒಂದಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಇಲಾಖೆಯ ವತಿಯಿಂದ ನೂರಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ. ಅಲ್ಲದೇ, ಸಮುದಾಯದ ಹಂತದಲ್ಲಿ ಸಾರ್ವಜನಿಕರಿಗೆ ಆರೋಗ್ಯ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಸುಮಾರು 25ಕ್ಕೂ ಹೆಚ್ಚು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಅನುಷ್ಠಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇಲಾಖೆಯ ವತಿಯಿಂದ ವೃದ್ಧರಿಗೆ, ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಸುಮಾರು 628 ವಿವಿಧ ಸಂಸ್ಥೆಗಳಲ್ಲಿ ವಿಶೇಷ ಸೇವೆಗಳನ್ನು ಒದಗಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿಸಲಾಗುತ್ತದೆ. ಇನ್ನು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ. ಇದನ್ನು ಸಾಕಷ್ಟು ಅಧಿಕಾರಿಗಳು ಸದುಪಯೋಗಪಡಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಏರ್ಪಡಿಸುವ ಕಾರ್ಯಕ್ರಮಗಳಿಗೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳು ಆಗಮಿಸಿ ಇದರ ಸದ್ಬಳಕೆ ಮಾಡಿಕೊಳ್ಳಬಹುದು ಎಂದರು.

ಇದನ್ನು ಓದಿದ್ದೀರಾ? ಚಾಮರಾಜ ನಗರ | ಹೊಗೇನಕಲ್ ಫಾಲ್ಸ್: ಪೊಲೀಸರ ಜಂಟಿ ಸಭೆ ಯಶಸ್ವಿ; ತೆಪ್ಪ ಸಂಚಾರ ಪುನರಾರಂಭ

ಪ್ರತಿ ಮಂಗಳವಾರ ಶನಿವಾರ ಮಾನಸಿಕ ಆರೋಗ್ಯದ ಸೈಕ್ಯಾಟ್ರಿಸ್ಟ್ ಕೌನ್ಸಿಲರ್ ಮತ್ತು ಸ್ಟಾಫ್ ನರ್ಸ್ಗಳನ್ನು ಒಳಗೊಂಡಿರುವ ಟೀಮ್ ಅನ್ನು ಎಲ್ಲ ತಾಲೂಕು ಆಸ್ಪತ್ರೆಗಳು ಒಳಗೊಂಡಿದ್ದು, ಸಾರ್ವಜನಿಕರು ತೆರಳಿ ಕಾಯಿಲೆಗೆ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಡಾ ಪಿ ಕುಮಾರಸ್ವಾಮಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಕೃಷ್ಣಂ ರಾಜು, ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಹಾಗೂ ಇನ್ನಿತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X