ಎರಡು ಭಾರಿ ನಾನು ಚುನಾವಣೆಯಲ್ಲಿ ಸೋತಿದ್ದೇನೆ. ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ಭಾವುಕರಾಗಿ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದರು.
ಕನ್ನಮಂಗಲ ಗ್ರಾಮದ ಪ್ರಚಾರ ಸಭೆಯಲ್ಲಿ ಮಾತನಾಡಿ, “ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂದುಕೊಂಡಿದ್ದೆ. ಆದರೆ ಒಳಗಡೆ ಸಾಕಷ್ಟು ನೋವುಗಳಿವೆ. ನಾನು ಎರಡು ಚುನಾವಣೆಯಲ್ಲೂ ಪೆಟ್ಟು ತಿಂದಿದ್ದೇನೆ. ಜನ ನನ್ನ ಪರವಾಗಿ ಮತ ಹಾಕಿದ್ದಾರೆ. ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬಹಳ ನೋವಿನಲ್ಲಿ ಇದ್ದೇನೆ. ಇವತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ಕೊಡಬೇಕೆಂದು ಈ ಚುನಾವಣೆಯಲ್ಲಿ ನಿಂತಿದ್ದೇನೆ. ದಯವಿಟ್ಟು ಈ ಭಾರಿ ಈ ಯುವಕನನ್ನು ಗೆಲ್ಲಿಸಿ” ಎಂದು ಮನವಿ ಮಾಡಿದರು.
“ಕಳೆದ ಭಾರಿ ಲೋಕಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಹಿ ಘಟನೆಯನ್ನು ನೆನೆಸಿಕೊಂಡು ನನ್ನ ಮೂಲಕ ಉತ್ತರ ಕೊಡಬೇಕು ಅಂತ ಕಾರ್ಯಕರ್ತರ ಭಾವನೆಯಾಗಿತ್ತು. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಅಂತ ಎಲ್ಲರಿಗೂ ಗೊತ್ತು. ಆಗ ನಾನು ದೇವೇಗೌಡರಿಗೆ ಮನವಿ ಮಾಡಿದೆ. ಪ್ರಾದೇಶಿಕ ಪಕ್ಷ ಕಟ್ಟುವುದೇ ಕಷ್ಟ ಇದೆ. ರೈತ ಪರವಾಗಿ ಕಾಳಜಿ ಇಟ್ಟುಕೊಂಡು ಈ ಪಕ್ಷ ವನ್ನು ಕಟ್ಟಿದ್ದಾರೆ. ನಂತರ ಕುಮಾರಣ್ಣ ಅವರು ಅಧಿಕಾರ ಇರಲಿ ಇಲ್ಲದೆ ಇರಲಿ ರೈತರ ಪರವಾಗಿ ನಿರಂತರವಾಗಿ ಸಾಲ ಮನ್ನಾ ಮಾಡಿದ್ದಾರೆ. ಅನೇಕ ಅಭಿವೃದ್ಧಿ ಕೆಲಸಗಳು ಮಾಡಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಲೆಕೇರಿ ಬಹುಕೋಟಿ ಹಗರಣದತ್ತ ಮಾಧ್ಯಮಗಳ ಮೌನವೇಕೆ?
“ಕಳೆದ ಲೋಕಸಭೆಯಲ್ಲಿ ಪಕ್ಷದ ಸಂಘಟನೆ ದೃಷ್ಟಿಯಿಂದ ಇಡೀ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ಪಕ್ಷದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿಬೇಕೆಂಬುದು ನನ್ನ ಅಭಿಲಾಷೆ. ಪ್ರಾದೇಶಿಕ ಪಕ್ಷ ಕಟ್ಟುವುದು ಕಷ್ಟ ಇದೆ. ನಿಮ್ಮೆಲ್ಲರ ಆಶೀರ್ವಾದದಿಂದ ಈ ಪಕ್ಷ ರಾಜ್ಯದಲ್ಲಿ ಉಳಿದುಕೊಂಡಿದೆ” ಎಂದು ಹೇಳಿದರು.
“ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಚನ್ನಪಟ್ಟಣ ತಾಲ್ಲೂಕು ಅತ್ಯಂತ ಮಹತ್ವ ಪಡೆದುಕೊಂಡಿದೆ. ಅದಕ್ಕೆ ಹಿಂದೆ ಕಾರಣ ಕುಮಾರಣ್ಣ ಸ್ಪರ್ಧೆ ಮಾಡಿದ್ದು. ನಾನು ಪ್ರತಿ ಹಳ್ಳಿ ಹಳ್ಳಿಗೂ ಭೇಟಿ ನೀಡುತಿದ್ದೇನೆ. ದಯಮಾಡಿ ನಿಮ್ಮೆಲ್ಲರ ಸಹಕಾರ ವಿಶ್ವಾಸ ನನ್ನ ಮೇಲಿರಲಿ. ದೇವೇಗೌಡರು ಮತ್ತು ಕುಮಾರಣ್ಣನ ಕಾಲದಲ್ಲಿ ಚನ್ನಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ” ಎಂದರು.
ಮನೆಯವರೆಲ್ಲಾ ದೇಶ ಸೇವೆ ಮಾಡಬೇಕೇನು