ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿದ್ದು, ಇದನ್ನು ಪ್ರತಿಯೊಬ್ಬರೂ ಒಪ್ಪಿಕೊಳ್ಳಲೇಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್ ಹಾಗೂ ಸಿಪಿಎಂ ಪಕ್ಷಗಳ ಬಹಿಷ್ಕಾರದ ನಡುವೆ ಕೇಂದ್ರಾಡಳಿತ ಪ್ರದೇಶದ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಲೆಕೇರಿ ಬಹುಕೋಟಿ ಹಗರಣದತ್ತ ಮಾಧ್ಯಮಗಳ ಮೌನವೇಕೆ?
ಸಿಎಂ ಒಮರ್ ಅಬ್ದುಲ್ಲಾ, ಅವರ ಸಂಪುಟ ಸಹೋದ್ಯೋಗಿಗಳು, ಎಲ್ಲ ಪ್ರಾದೇಶಿಕ ಪಕ್ಷಗಳ ಮುಖಂಡರು ಕೂಡಾ ಸಮಾರಂಭದಿಂದ ದೂರ ಉಳಿದಿದ್ದರು.
ಇತ್ತೀಚಿಗಷ್ಟೆ ನಡೆದಿದ್ದ ಜಮ್ಮು ಕಾಶ್ಮೀರ ವಿದಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟ ಬಹುಮತದೊಂದಿಗೆ 48 ಸ್ಥಾನಗಳಿಸಿ ಸರ್ಕಾರ ರಚಿಸಿತ್ತು. ಬಿಜೆಪಿಗೆ 29 ಸೀಟ್ ಮಾತ್ರ ಲಭ್ಯವಾಗಿತ್ತು.
