ಪ್ರಸಿದ್ಧ ಕನ್ನಡ ನಟ ಡಾಲಿ ಧನಂಜಯ್ ಅವರು ಧನ್ಯತಾ ಎಂಬ ವೈದ್ಯೆಯನ್ನು ವಿವಾಹವಾಗುತ್ತಿದ್ದಾರೆ. ಫೆಬ್ರುವರಿ 16 ರಂದು ಮೈಸೂರಿನಲ್ಲಿ ಅದ್ಧೂರಿ ಮದುವೆ ನಡೆಯಲಿದೆ. ಧನ್ಯತಾ ಅವರು ಚಿತ್ರದುರ್ಗ ಮೂಲದವರು ಮತ್ತು ಮೈಸೂರಿನಲ್ಲಿ ವ್ಯಾಸಂಗ ಮಾಡಿದ್ದಾರೆ.
ಸ್ತ್ರೀರೋಗ ತಜ್ಞೆ ಆಗಿರುವ ಧನ್ಯತಾ, ಧನಂಜಯ್ಗೆ ಜೊತೆಯಾಗುತ್ತಿದ್ದಾರೆ. ಡಾಲಿ ಮತ್ತು ಧನ್ಯತಾ ಮಧ್ಯೆ ಅನೇಕ ವರ್ಷಗಳ ಪರಿಚಯ ಇದೆ. ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೇರಳದ ಹೇಮಾ ಸಮಿತಿ ಮೂಲಕ ದಾಖಲಾಗಿದ್ದ ಪ್ರಕರಣ ಬೆಂಗಳೂರಿಗೆ ವರ್ಗಾವಣೆ
ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಡಾಲಿ ಧನಂಜಯ ಅವರು ಕವನ ಹೇಳುತ್ತಾ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.
ಪ್ರೀತಿಯ ಕರುನಾಡಿಗೆ,
— Dhananjaya (@Dhananjayaka) November 1, 2024
ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ.
ಮದುವೆಗೆ ಕರಿತೀನಿ,… pic.twitter.com/0M4CL0cQDL
ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗದವರು, ರಾಜಕೀಯ ಕ್ಷೇತ್ರದವರು ಸೇರಿ ಅನೇಕ ಗಣ್ಯರು ಹಾಜರಾಗಲಿದ್ದಾರೆ. ಬೆಳಿಗ್ಗೆ ವಿವಾಹ ನಡೆಯಲಿದ್ದು, ಅದೇ ದಿನ ಅದೇ ವೇದಿಕೆ ಮೇಲೆ ಆರತಕ್ಷತೆ ಸಮಾರಂಭ ಕೂಡ ಜರುಗಲಿದೆ.
