ರಾಜ್ಯೋತ್ಸವ | ನಾವು ಕೊಡುವುದು ₹4 ಲಕ್ಷ ಕೋಟಿ, ಕೇಂದ್ರದಿಂದ ಮರಳಿ ಬರುವುದು ₹50 ಸಾವಿರ ಕೋಟಿ ಮಾತ್ರ: ಸಿಎಂ

Date:

Advertisements

ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರವು ತಾರತಮ್ಯ ಮಾಡುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ಸಂಭ್ರಮದ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. “ರಾಜ್ಯಗಳ ಏಕೀಕರಣವಾಗಿ 68 ವರ್ಷಗಳಾಗಿವೆ. 1973ರವರೆಗೆ ರಾಜ್ಯ ಕರ್ನಾಟಕ ಆಗಿರಲಿಲ್ಲ, ಮೈಸೂರು ರಾಜ್ಯ ಆಗಿತ್ತು. 1973 ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಅಂತ ಹೆಸರು ಇಡಲಾಯಿತು. ಕರ್ನಾಟಕವೆಂದು ನಾಮಕರಣವಾಗಿ 51 ವರ್ಷ ತುಂಬುತ್ತಿದೆ. ಮರುನಾಮಕರಣವಾಗಿ 50 ವರ್ಷ ಆದಾಗ ಬಿಜೆಪಿ ಸರ್ಕಾರ ರಾಜ್ಯದಲ್ಲಿತ್ತು. ಅವರು 50ನೇ ವರ್ಷದ ಆಚರಣೆ ಮಾಡಲಿಲ್ಲ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಇಡೀ ವರ್ಷ ಸಂಭ್ರಮಾಚರಣೆ ಮಾಡಿದ್ದೇವೆ” ಎಂದಿದ್ದಾರೆ.

“ನಾವೆಲ್ಲರೂ ವ್ಯವಹಾರದಲ್ಲಿ ಕನ್ನಡ ಬಳಕೆ ಜೊತೆಗೆ, ಎಲ್ಲರೊಂದಿಗೂ ಕನ್ನಡದಲ್ಲೇ ಮಾತಾಡುವ ಶಪಥ ಮಾಡಬೇಕು. ಬೇರೆ ಭಾಷಿಕರಿಗೂ ಕನ್ನಡ ಕಲಿಸಬೇಕು. ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿಕೊಡುವಷ್ಟು ಉದಾರಿಗಳಾಗಬಾರದು. ಕನ್ನಡ ಅಭಿಮಾನ ಬಿಟ್ಟುಕೊಡಬಾರದು. ಜೊತೆಗೆ, ಅಭಿಮಾನ ದುರಾಭಿಮಾನವಾಗದೆಂಬ ಎಚ್ಚರಿಕೆಯೂ ಇರಬೇಕು. ಕೆಲವು ರಾಜ್ಯಗಳಲ್ಲಿ ಭಾಷಾ ದುರಾಭಿಮಾನ ಇದೆ. ನಮ್ಮ ರಾಜ್ಯದಲ್ಲಿ ಅಭಿಮಾನ ಇದೆ. ಅಭಿಮಾನ ಇದ್ದರೆ ಮಾತ್ರ ಕನ್ನಡ ಉಳಿಸಲು ಬೆಳೆಸಲು ಸಾಧ್ಯ” ಎಂದು ಹೇಳಿದ್ದಾರೆ.

Advertisements

ಈ ವರದಿ ಓದಿದ್ದೀರಾ?; ಕರ್ನಾಟಕಕ್ಕೆ ತೆರಿಗೆ ಅನ್ಯಾಯ | ಕೇಂದ್ರ ಸಮರ್ಥಿಸುವ ಆರ್‌ ಅಶೋಕ್‌, ನಾಚಿಕೆ ಆಗಲ್ವಾ?

“ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಆಗುತ್ತಿದೆ. ಮಹಾರಾಷ್ಟ್ರ ಬಿಟ್ಟರೆ ಅತೀ ಹೆಚ್ಚು ತೆರಿಗೆ ಕೊಡುವ ರಾಜ್ಯ ಕರ್ನಾಟಕ. ನಾವು 4 ಲಕ್ಷ ಕೋಟಿಗೂ ಹೆಚ್ಚು ತೆರಿಗೆ ಕೊಟ್ಟರೂ ವಾಪಸ್ ಪಡೆಯುತ್ತಿರೋದು ಕೇವಲ 50-60 ಸಾವಿರ ಕೋಟಿ ರೂ. ಮಾತ್ರ. ಅಂದರೆ, 1 ರೂ.ನಲ್ಲಿ 14-15 ಪೈಸೆ ಮಾತ್ರ ನಮಗೆ ವಾಪಸ್ ಕೊಡುತ್ತಿದ್ದಾರೆ. ನಾವು ಮುಂದುವರೆದ ರಾಜ್ಯ ಎಂದು ತೆರಿಗೆ ಪಾಲಿನಲ್ಲಿ ಅನ್ಯಾಯ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

Download Eedina App Android / iOS

X