ಸಾಗರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಚಲಿಸುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಕಾರು ಚಾಲಕ ಪರಾರಿಯಾಗಿದ್ದಾನೆ. ದಾಸಕೊಪ್ಪದ ನಿವಾಸಿಗಳಾದ ಗಣಪತಿ ಮತ್ತು ವಾಸು ಎಂಬುವವ ಅಪಘಾತಕ್ಕೀಡಾಗಿದ್ದು, ಗಾಯಗೊಂಡಿದ್ದಾರೆ.
ಅದೃಷ್ಟವಶಾತ್ ಬೈಕಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದು, ಕೂಡಲೇ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಇವರನ್ನು ರವಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೆಂ.ನಗರ | ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ; 200 ಹಾಸಿಗೆಯುಳ್ಳ ಇಎಸ್‌ಐ ಆಸ್ಪತ್ರೆ ನಿರ್ಮಾಣ
ವಾಸು ಎಂಬುವವರಿಗೆ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದು, ಕಾಲಿಗೆ ಸ್ವಲ್ಪ ಪ್ರಮಾಣಲ್ಲಿ ಗಾಯಗಳಾಗಿವೆ. ಕೂಡಲೇ ಅವರನ್ನು ಅನಂದಪುರ ಸರ್ಕಾರಿ ಆಸ್ಪತ್ರೆಯಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಈಗ ಸ್ವಲ್ಪ ಚೇತರಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.
ವರದಿ : ಅಮಿತ್ ಆರ್, ಆನಂದಪುರ