ಕರ್ನಾಟಕ ಸರ್ಕಾರ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿತ್ತು. ಚಿಕ್ಕಮಗಳೂರು ನಗರ ಚೈತನ್ಯ ಭಾರತಿ ಜ್ಯೋತಿ ನಗರದಲ್ಲಿ ಇರುವ ಎಂ.ಎಲ್ ಮಂಜಯ್ಯ ಶೆಟ್ಟಿ ನರಸಿಂಹಶೆಟ್ಟಿ ಶಿಕ್ಷಕರ ಶಿಕ್ಷಣ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿಲ್ಲ ಎಂದು ಸಂವಿಧಾನ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರಾದ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
ಪ್ರತೀ ಜಿಲ್ಲೆಯಲ್ಲೂ ಶಾಲಾ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲೂ ಕನ್ನಡ ರಾಜ್ಯೋತ್ಸವ ಆಚರಿಸುತ್ತಾರೆ.ಆದರೆ ಚಿಕ್ಕಮಂಗಳೂರು ನಗರದ ಎಂ. ಎಲ್ ಮಂಜಯ್ಯ ಶೆಟ್ಟಿ ನರಸಿಂಹ ಶೆಟ್ಟಿ ಶಿಕ್ಷಕರ ಶಿಕ್ಷಣ ವಿದ್ಯಾನಿಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿಲ್ಲ, ಕರ್ನಾಟಕ ಸರ್ಕಾರದ ಆದೇಶವನ್ನು ಧಿಕ್ಕರಿಸಿದ್ದಾರೆ. ಕನ್ನಡ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ, ಎಂದು ಸಂವಿಧಾನ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರಾದ ಕೃಷ್ಣ ಮೂರ್ತಿ ಅವರು ಬಿ.ಎಡ್ ಕಾಲೇಜ್ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ಐದು ವರ್ಷವೂ ಶಕ್ತಿ ಯೋಜನೆ ಅನುಷ್ಠಾನದಲ್ಲಿ ಇರಲಿದೆ: ಗೃಹ ಸಚಿವ ಜಿ ಪರಮೇಶ್ವರ್
ಈ ವೇಳೆ ಸಂವಿಧಾನ ಸಂರಕ್ಷಣಾ ವೇದಿಕೆ ಸಮಿತಿಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತಿಯಲ್ಲಿದ್ದರು.
