ನಿಷೇಧದ ನಡುವೆಯೂ ಪಟಾಕಿ ಸಿಡಿಸಿದ ಜನತೆ: ವಿಶ್ವದ ಅತ್ಯಂತ ಕಲುಷಿತ ನಗರವಾದ ದೆಹಲಿ

Date:

Advertisements

ನಿಷೇಧ ನಡುವೆಯು ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪ್ರಮಾಣ ಪಟಾಕಿ ಸಿಡಿಸಲಾಗಿದ್ದು, ಶುಕ್ರವಾರ(ನವೆಂಬರ್ 1) ಬೆಳಗ್ಗೆ 6 ಗಂಟೆಗೆ ಗಾಳಿ ಗುಣಮಟ್ಟ ಸೂಚ್ಯಂಕ 359 ದಾಖಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಇದು ʻಅತ್ಯಂತ ಕಳಪೆʼ ವಿಭಾಗಕ್ಕೆ ಸೇರಿದ್ದು ಈ ಮೂಲಕ ದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.

ಲಜಪತ್ ನಗರ್, ಕಲ್ಕಾಜಿ, ಛತ್ತರ್‌ಪುರ, ಜೌನಾಪುರ್, ಕೈಲಾಶ್ ಪೂರ್ವ, ಸಾಕೇತ್, ರೋಹಿಣಿ, ದ್ವಾರಕಾ, ಪಂಜಾಬಿ ಬಾಗ್, ವಿಕಾಸಪುರಿ, ದಿಲ್ಶಾದ್ ಗಾರ್ಡನ್, ಬುರಾರಿ ಮತ್ತು ಪೂರ್ವ ಮತ್ತು ಪಶ್ಚಿಮ ದೆಹಲಿಯ ಹಲವಾರು ಪ್ರದೇಶಗಳಲ್ಲಿ ಪಟಾಕಿಗಳನ್ನು ಸಿಡಿಸಲಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.

ಬೆಳಿಗ್ಗೆ 6 ಗಂಟೆಗೆ, ಬುರಾರಿ ಕ್ರಾಸಿಂಗ್ (394), ಜಹಾಂಗೀರ್‌ಪುರಿ (387), ಆರ್‌ಕೆ ಪುರಂ (395), ರೋಹಿಣಿ (385), ಅಶೋಕ್ ವಿಹಾರ್ (384), ದ್ವಾರಕಾ ಸೆಕ್ಟರ್ 8 (375), ಐಜಿಐ ವಿಮಾನ ನಿಲ್ದಾಣ (375), ಮಂದಿರ ಮಾರ್ಗ ( 369), ಪಂಜಾಬಿ ಬಾಗ್ (391), ಆನಂದ್ ವಿಹಾರ್ (395), ಸಿರಿ ಫೋರ್ಟ್ (373) ಮತ್ತು ಸೋನಿಯಾ ವಿಹಾರ್ (392) ಗಾಳಿಯ ಗುಣಮಟ್ಟ ದಾಖಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಲೆಕೇರಿ ಬಹುಕೋಟಿ ಹಗರಣದತ್ತ ಮಾಧ್ಯಮಗಳ ಮೌನವೇಕೆ? 

ಎನ್‌ಸಿಆರ್ ಪ್ರದೇಶಗಳಾದ ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಕ್ರಮವಾಗಿ 293, 316 ಮತ್ತು 348 ಎಕ್ಯೂಐ ಮಟ್ಟವನ್ನು ದಾಖಲಿಸಿವೆ. ಅಕ್ಟೋಬರ್ 14 ರಂದು, ದೆಹಲಿ ಸರ್ಕಾರವು ನಗರದಾದ್ಯಂತ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲೆ ನಿಷೇಧವನ್ನು ವಿಧಿಸಿತು. ಅದಾಗ್ಯೂ ಜನರು ಅಧಿಕ ಪ್ರಮಾಣ ಪಟಾಕಿ ಸಿಡಿಸಿದ್ದಾರೆ.

ದೀಪಾವಳಿ ಮುನ್ನಾದಿನದಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಅವರು ರಾಷ್ಟ್ರ ರಾಜಧಾನಿಯಾದ್ಯಂತ ಪಟಾಕಿ ನಿಷೇಧ ಜಾರಿಗೊಳಿಸಲು 377 ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ್ದರು. ಜಾಗೃತಿ ಮೂಡಿಸಲು ಅಧಿಕಾರಿಗಳು ಸಂಘಸಂಸ್ಥೆಗಳು, ಮಾರುಕಟ್ಟೆ ಸಂಘಗಳು ಮತ್ತು ಸಾಮಾಜಿಕ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದ್ದರು. ಪಟಾಕಿ ಸಿಡಿಸದಂತೆ ನೋಡಿಕೊಳ್ಳಲು ಪೊಲೀಸ್ ತಂಡಗಳನ್ನೂ ರಚಿಸಲಾಗಿತ್ತು.

ಪಟಾಕಿಗಳನ್ನು ಸಿಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಯ ಸಂಬಂಧಿತ ವಿಭಾಗಗಳ ಅಡಿಯಲ್ಲಿಯೂ ದಾಖಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದರು‌. ಆದರೂ ಪಟಾಕಿಗಳನ್ನು ಸಿಡಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X