ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಜ್ಯೋತಿ (29) ಹತ್ಯೆಯಾದ ಮಹಿಳೆ. ಕಳೆದ 10 ವರ್ಷದ ಹಿಂದೆ ಮದುವೆಯಾಗಿದ್ದು, ಕೌಟುಂಬಿಕ ಕಲಹ ಹಿನ್ನಲೆ ಕಳೆದ 5 ವರ್ಷದಿಂದ ತವರು ಮನೆಯಲ್ಲಿ ವಾಸಿಸುತ್ತಿದ್ದಳು ಎನ್ನಲಾಗಿದೆ,
ಗುರುವಾರ ಬೆಳಿಗ್ಗೆ ಮನೆಯಿಂದ ಹೊರ ಹೋಗಿದ್ದ ಜ್ಯೋತಿ, ಮಧ್ಯಾಹ್ನ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಕೌಟುಂಬಿಕ ಕಲಹದ ಹಿನ್ನಲೆ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ: ಹಲವರು ಪೊಲೀಸ್ ವಶಕ್ಕೆ
ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.