ಲೇಡಿ ಸಿಂಘಂ ಖ್ಯಾತಿಯ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಸಾವು

Date:

Advertisements

ಅಸ್ಸಾಂನಲ್ಲಿ ‘ಲೇಡಿ ಸಿಂಘಂ’ ಎಂದೇ ಖ್ಯಾತಿ ಗಳಿಸಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

30 ವರ್ಷ ವಯಸ್ಸಿನ ಜುನ್ಮೋನಿ ರಾಭಾ ಅವರು ನಾಗೂನ್‌ ನಗರದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಜುನ್ಮೋನಿ ರಾಭಾ ಅವರು ಒಬ್ಬರೇ ಇದ್ದರು ಎನ್ನಲಾಗಿದ್ದು, ವಾಹನದಲ್ಲಿ ಪೊಲೀಸ್ ಸಮವಸ್ತ್ರದಲ್ಲಿ ಇರಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜುನ್ಮೋನಿ ರಾಭಾ ಅಸ್ಸಾಂ ಪೊಲೀಸ್‌ ಇಲಾಖೆಯಲ್ಲಿ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿವಾದಗಳಿಂದಾಗಿ ಅವರು ಹಲವು ಸಲ ಅಮಾನತುಗೊಂಡಿದ್ದರು. ಹಲವು ಕಷ್ಟಕರ ಪ್ರಕರಣಗಳನ್ನು ಧೈರ್ಯವಾಗಿ ಎದುರಿಸಿದ್ದ ಅವರು, ಉದ್ಯೋಗದ ಹೆಸರಿನಲ್ಲಿ ವಂಚಿಸಿದ್ದ ಸ್ವತಃ ಭಾವಿ ಪತಿಯನ್ನು ಬಂಧಿಸಿ ಜನಮೆಚ್ಚುಗೆ ಪಡೆದಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಭಯೋತ್ಪಾದಕರೊಂದಿಗೆ ನಂಟು: 6 ರಾಜ್ಯಗಳ 122 ಸ್ಥಳಗಳಲ್ಲಿ ಎನ್‌ಐಎ ದಾಳಿ

ಅಸ್ಸಾಂ ಪೊಲೀಸ್‌ ಅಧಿಕಾರಿಗಳು ಜುನ್ಮೋನಿ ರಾಭಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ. ಜುನ್ಮೋನಿ ರಾಭಾ ಅವರು ಬಾಲಿವುಡ್ ಸಿನಿಮಾಗಳ ನಂತರ ಲೇಡಿ ಸಿಂಘಂ, ದಬಾಂಗ್ ಕಾಪ್ ಎಂದು ಜನಪ್ರಿಯತೆ ಗಳಿಸಿದ್ದರು.

ನಾಗಾವ್ ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಗುವಾಹಟಿಯಲ್ಲಿ ಜುನ್ಮೋನಿ ರಾಭಾ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಈ ಘಟನೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆಕೆಯ ಕುಟುಂಬವು ಅಪಘಾತದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದೆ.

ಕಂಟೈನರ್ ಟ್ರಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಟ್ರಕ್ ಉತ್ತರ ಪ್ರದೇಶದ ನೋಂದಣಿ ಸಂಖ್ಯೆಯನ್ನು ಹೊಂದಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X