- ನಾಲ್ಕುದಿನದ ಮ್ಯಾರಥಾನ್ ಮೀಟಿಂಗ್‌ಗೆ ಕೊನೆ ಹಾಡಿದ ಕೈ ಕಮಾಂಡ್
- ಇಂದು ಮಧ್ಯಾಹ್ನ ನೂತನ ಮುಖ್ಯಮಂತ್ರಿ ಘೋಷಿಸಲಿರುವ ಎಐಸಿಸಿ ಅಧ್ಯಕ್ಷರು
ಕಳೆದ ನಾಲ್ಕು ದಿನಗಳಿಂದ ಮುಂದುವರೆದಿದ್ದ ಮುಖ್ಯಮಂತ್ರಿ ಆಯ್ಕೆ ವಿಚಾರದ ಹಗ್ಗಜಗ್ಗಾಟ ಅಂತಿಮಗೊಂಡಿದ್ದು, ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಹಾಗೂ ಡಿಕೆ ಶಿವಕುಮಾರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹೈ ಕಮಾಂಡ್ ಮುಂದಾಗಿದೆ.
ದೆಹಲಿ ಮೂಲಗಳ ಮಾಹಿತಿ ಪ್ರಕಾರ ಈಗಾಗಲೇ ಈ ಪ್ರಕ್ರಿಯೆ ಅಂತಿಮಗೊಂಡಿದ್ದು, ಅಧಿಕೃತ ಘೋಷಣೆಯೊಂದೇ ಉಳಿದುಕೊಂಡಿದೆ.
ಸಿದ್ಧರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಎರಡು ಪ್ರಮುಖ ಖಾತೆಗಳನ್ನ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ.
ಈ ಸುದ್ದಿ ಓದಿದ್ದೀರಾ?:ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸುನಿಲ್, ಶಾಸಕಾಂಗ ಪಕ್ಷದ ನಾಯಕರಾಗಿ ಬೊಮ್ಮಾಯಿ?
ದೆಹಲಿ ಬೆಳವಣಿಗೆಗೆಳು ಈ ರೀತಿ ಆದರೆ, ರಾಜ್ಯದಲ್ಲೂ ಸಿಎಂ ಆಯ್ಕೆ ವಿಚಾರದ ಕುತೂಹಲ ಕೆರಳಿಸಿದೆ. ಅದರಲ್ಲೂ ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸಿದ್ದರಾಮಯ್ಯಗೆ ನಿವಾಸದ ಬಳಿ ಈಗಾಗಲೇ ಅವರ ಅಭಿಮಾನಿಗಳು ನೆರೆಯತೊಡಗಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಇಲ್ಲಿ ಒಂದು ಕೆಎಸ್ಆರ್ಪಿ ವ್ಯಾನ್, 70 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.