ಬಾಗಲಕೋಟೆ | ಕನ್ನಡ ಭಾಷೆ ಉಳಿಸಿ ಬೆಳೆಸುವ ಅಗತ್ಯವಿದೆ: ಶ್ವೇತ ಬಿಡಿಕರ

Date:

Advertisements

ಕನ್ನಡ ಭಾಷೆ ಮತ್ತು ಕನ್ನಡಿಗರ ಲಿಪಿಗಳಿಗೆ ಶತಮಾನಗಳ ಇತಿಹಾಸವಿದೆ. ಭಾಷೆ ಎಂಬುದು ಜ್ಞಾನ, ಭಾಷೆಯೆಂಬುದು ಸಾಹಿತ್ಯವಾಗಿದೆ. ಕನ್ನಡ ಭಾಷೆ ಮಾತ್ರ ಭಂಡಾರವನ್ನು ತುಂಬಿಕೊಂಡಿರುವ ಭಾಷೆಯಾಗಿದೆ. ಕನ್ನಡದ ಬಳಕೆಯು ಇತ್ತೀಚಿಗೆ ಕಡಿಮೆ ಆಗುತ್ತಿದ್ದು, ಕನ್ನಡ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಶ್ವೇತ ಬಿಡಿಕರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಹೊಕ್ಕಳಬಾವಿಯಲ್ಲಿ ನಡೆದ 69 ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 1973 ರಲ್ಲಿ ಕನ್ನಡ ಸಂಘ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಕನ್ನಡದ ಶ್ರೀಮಂತಿಕೆ ಮತ್ತು ಕನ್ನಡ ಭಾಷಾವಾರು ಬಗ್ಗೆ ನಿರಂತರ ಮೆಲುಕು ಹಾಕಬೇಕಿದೆ.

ಜಮಖಂಡಿ ನಗರದಲ್ಲಿ 50 ವರ್ಷದ ಹಿಂದೆ ಮರಾಠಿ ಭಾಷೆ ರೂಡಿಯಲ್ಲಿತ್ತು. ಈಗಲೂ ಸಹ ಬೆಳಗಾವಿಯ ಕೆಲವು ಭಾಗಗಳಲ್ಲಿ ಮಾರಾಠಿ ಮಾತನಾಡುವ ಜನ ಸಿಗುತ್ತಾರೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಅವಶ್ಯಕತೆ ಇದ್ದು, ಕನ್ನಡದ ಅಭಿಮಾನಿಗಳು ಕರ್ನಾಟಕದಲ್ಲಿ ಅಷ್ಟೇ ಅಲ್ಲದೆ ವಿವಿಧ ರಾಜ್ಯಗಳಲ್ಲೂ ಇದ್ದಾರೆ. ಬ್ರಿಟಿಷರ ಆಡಳಿತದ ವಿರುದ್ಧ ಕರ್ನಾಟಕ ಏಕೀಕರಣ ಮತ್ತು ಸ್ವತಂತ್ರ ಚಳುವಳಿ ಎಂಬ ಎರಡು ಹೋರಾಟಗಳು ಹುಟ್ಟಿಕೊಂಡವು.

Advertisements

ಇದನ್ನು ಓದಿದ್ದೀರಾ? ವಿಜಯಪುರ | ಆದಷ್ಟು ಶೀಘ್ರ ವಿಮಾನ ನಿಲ್ದಾಣದ ಕಾಮಗಾರಿ ಮುಗಿಯಲಿದೆ: ರಾಜ್ಯೋತ್ಸವ ಭಾಷಣದಲ್ಲಿ ಸಚಿವ ಎಂ.ಬಿ.ಪಾಟೀಲ್‌

ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಅರುಣ ಕುಮಾರ, ವಿಧಾನಪರಿಷತ್ ಮಾಜಿ ಸದಸ್ಯ ಜಿ. ಎಸ್. ನ್ಯಾಮಗೌಡ, ನಗರಸಭೆ ಅಧ್ಯಕ್ಷ ಪರಮಾನಂದ ಗೌರೋಜಿ, ನಗರ ಪ್ರಾಧಧಿಕಾರಿ ಅಧ್ಯಕ್ಷ ಅನ್ವರ ಮೊಸಿನ, ಶಿಕ್ಷಕರ ಸಂಘದ ಅಧ್ಯಕ್ಷ ಪಿ. ಬಿ. ಅಜ್ಜನ್ನವರ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಂತೋಷ ತಳಕೇರಿ, ಡಿ. ಎಸ್. ಶಾಂತವೀರ, ಸಂಜು ಬನ್ನೂರು, ನಗರ ಪೌರಾಯುಕ್ತ ಗಿರೀಶ್ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X