‘ಮಠ’ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ನಿಧನ; ಆತ್ಮಹತ್ಯೆ ಶಂಕೆ

Date:

Advertisements

ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ, ನಟ ಗುರುಪ್ರಸಾದ್ ನಿಧನರಾಗಿದ್ದಾರೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಮಾದನಾಯಕಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಅವರು ಸಾಲದ ಸುಲಿಯಲ್ಲಿ ಸಿಲುಕಿದ್ದರು ಎಂದು ಹೇಳಲಾಗಿದೆ. ಆದರೆ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನು ಓದಿದ್ದೀರಾ? ಮಂಡ್ಯ | ಬೆಟ್ಟಿಂಗ್‌ ಚಟಕ್ಕೆ ಸಿಲುಕಿ ಸಾಲಬಾಧೆ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

Advertisements

ಸುಮಾರು ಹತ್ತು ದಿನಗಳ ಹಿಂದೆಯೇ ಗುರುಪ್ರಸಾದ್ ಸಾವನ್ನಪ್ಪಿದ್ದು, ಮೃತದೇಹ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಕನ್ನಡದಲ್ಲಿ ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ಎರಡನೇ ಸಲ ಮತ್ತು ರಂಗನಾಯಕ ಸಿನಿಮಾವನ್ನು ನಿರ್ದೆಶಿಸಿದ್ದಾರೆ. ಹಾಗೆಯೇ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಗೆಯೇ ಬಿಗ್‌ಬಾಸ್‌ ಸ್ಪರ್ಧಿಯಾಗಿದ್ದರು. ಕೆಲವು ರಿಯಾಲಿಟಿ ಶೋಗಳ ತೀರ್ಪುಗಾರರಾಗಿದ್ದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X