ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ಬೇಸತ್ತು ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ರಾಮತೀರ್ಥ(ಕೆ) ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಸಹದೇವ ವಸಂತರಾವ ಜಾಧವ (36) ಮೃತ ರೈತ. ರೈತನು ಕೃಷಿ ಚಟುವಟಿಕೆಗಾಗಿ ಖಾಸಗಿ ಸಾಲ ಮಾಡಿಕೊಂಡಿದ್ದರು. ಅದನ್ನು ತೀರಿಸಲು ಸಾಧ್ಯವಾಗದೆ ಮನನೊಂದು ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಕ್ಫ್ ವಿವಾದವೆಂಬ ಕೃತಕ ಸೃಷ್ಟಿ – ಮತ್ತೊಮ್ಮೆ ಮಾಧ್ಯಮಗಳ ಬಣ್ಣ ಬಯಲು
ಈ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.