ರಾಯಚೂರು | ಆರ್‌ಡಿಸಿಸಿ ಬ್ಯಾಂಕ್‌ನಲ್ಲಿ ಹಗಲು ದರೋಡೆ; ಖಾತೆಗಳ ದುರ್ಬಳಕೆ ಆರೋಪ

Date:

Advertisements

ಆರ್‌ಡಿಸಿಸಿ ಬ್ಯಾಂಕ್ ರೈತರ ಖಾತೆಗೆ ಹಣ ಹಾಕಿ, ನಂತರ ಅದನ್ನು ಖಾತೆಯಿಂದ ತೆಗೆಯುವ ಮೂಲಕ ರೈತರಿಗೆ ಸಾಲ ನೀಡಿದೆ ಎಂದು ತೋರಿಸಿ ಇದೀಗ ಸುಲಿಗೆ ಮಾಡುತ್ತಿದೆ. ಬ್ಯಾಂಕ್ ಅಧ್ಯಕ್ಷ, ವ್ಯವಸ್ಥಾಪಕರು ಸೇರಿ 14 ಜನರ ವಿರುದ್ಧ ಮುದಗಲ್ ಮತ್ತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ 5 ಪ್ರಕರಣ ದಾಖಲಾಗಿದ್ದು ಬಂಧಿಸಿ ತನಿಖೆ ನಡೆಸಬೇಕು ಎಂದು ಟಿಯುಸಿಐ ಪ್ರಧಾನ ಕಾರ್ಯದರ್ಶಿ ಆರ್.ಮಾನಸಯ್ಯ ಹೇಳಿದರು.

ಅವರು ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಯಚೂರು, ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್( ಆರ್ ಕೆಡಿಸಿಸಿ) ಬ್ಯಾಂಕ್ ನಲ್ಲಿ ರೈತರ ಖಾತೆಗೆ ಲಕ್ಷಾಂತರ ರೂಪಾಯಿ ಹಣ ಜಮಾ ಮಾಡಿ ಬ್ಯಾಂಕ್ ಅಧಿಕಾರಿಗಳು ಪುನಃ ವಿತ್ ಡ್ರಾ ಮಾಡಿಕೊಂಡು ಖಾತೆ ದುರ್ಬಳಕೆ ಮಾಡಿಕೊಂಡು ಅವ್ಯವಹಾರ ನಡೆಸಿದ್ದಾರೆ. ಬ್ಯಾಂಕ್ ನಿರ್ದೇಶಕ ಮಂಡಳಿಯ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ವಿಶ್ವನಾಥ ಪಾಟೀಲ, ಸಿಇಒ ಐಎಸ್ ಗಿರಡ್ಡಿ ಅವರು ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಕೂಡಲೇ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಬೇಕು ಎಂದರು.

ರೈತರಿಗೆ ಬಡ್ಡಿ ರಹಿತ ಸಾಲ ನೀಡಲು ಹಾಗೂ ಸಣ್ಣ ಹಾಗೂ ಮಧ್ಯಮ ಪ್ರಮಾಣ ಸಾಲಮನ್ನಾ ಮಾಡುವ ಉದ್ದೇಶದಿಂದ ಸ್ಥಾಪಿಸಲಾದ ಆರ್‌ಕೆಡಿಸಿಸಿ ಬ್ಯಾಂಕ್ ನಿಯಮ ಬಾಹೀರವಾಗಿ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯ ಲಿಂಗಸುಗೂರು ಬ್ರಾಂಚ್‌ನ ಲಿಂಗಸುಗೂರು ಹಾಗೂ ಮುದಗಲ್ ಪಟ್ಟಣದ ಅನೇಕ ರೈತರ ಬ್ಯಾಂಕ್ ಖಾತೆಗೆ 2017ರಿಂದ 2024ರ ವರಗೆ ಲಕ್ಷಾಂತರ ರೂಪಾಯಿ ಹಣ ಜಮಾ ಮಾಡಿ ಆನಂತರ ಬ್ಯಾಂಕ್ ಅಧಿಕಾರಿಗಳೇ ವಿತ್ ಡ್ರಾ ಮಾಡಿಕೊಂಡಿದ್ದಾರೆ ಎಂದರು.

Advertisements

ರೈತರ ಖಾತೆಗಳನ್ನು ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳೆ ಪುನಃ ವಿತ್ ಡ್ರಾ ಆದ ಹಣಕ್ಕೆ ಸಾಲ ಎಂದು ನಮೂದಿಸಿಕೊಂಡು ಸಾಲ ಮರುಪಾವತಿಗೆ ರೈತರಿಗೆ ನೊಟೀಸ್ ನೀಡಿದ್ದಾರೆ ಎಂದು ಆರೋಪಿಸಿದರು. ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳನ್ನು ಒಳಗೊಂಡ ಆರ್ ಕೆಡಿಸಿಸಿ ಬ್ಯಾಂಕ್ ನಲ್ಲಿ 39 ಶಾಖೆಗಳಿವೆ. ರಾಯಚೂರು ಜಿಲ್ಲೆಯ 1.14 ಲಕ್ಷಕ್ಕೂ ಹೆಚ್ಚು ಗ್ರಾಹಕರು ಇದ್ದಾರೆ. ಬ್ಯಾಂಕ್ ನಿರ್ದೇಶಕ ಮಂಡಳಿಯ ಅಧ್ಯಕ್ಷ ವಿಶ್ವನಾಥ ಪಾಟೀಲ, ನಿವೃತ್ತ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಐಎಸ್ ಗಿರಡ್ಡಿ ಪ್ರಧಾನ ವ್ಯವಸ್ಥಾಪಕ ಅಲಿ ಮುರ್ತುಜಾ, ಆಂತರಿಕ ಲೆಕ್ಕ ಪರಿಶೋಧಕ ವಿ.ಕೆ ಇನಾಮದಾರ್ ಸೇರಿದಂತೆ ಬ್ಯಾಂಕ್ ಅಧಿಕಾರಿ ಹಾಗೂ ಸಿಬ್ಬಂದಿ ಶಾಮೀಲಾಗಿ ಹಗಲು ದರೋಡೆ ಮಾಡಿದ್ದಾರೆ ಎಂದು ದೂರಿದರು.

ರೈತ ಶರಣಬಸವ, ಬಸವರಾಜ, ಲಾಲ್ ಸಾಬ್ ಶರಣಪ್ಪ ಅವರು ನೀಡಿದ ದೂರಿನ ಮೇರೆಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ 4 ದೂರು ದಾಖಲಾಗಿದೆ ಹಾಗೂ ರೈತ ಶರಣಪ್ಪ ಅಮರಪ್ಪ ಕುರಬರ ಅವರಿಂದ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಕಾರು-ಬೈಕ್ ಡಿಕ್ಕಿ: ಇಬ್ಬರು ಮೃತ್ಯು; ಇಬ್ಬರಿಗೆ ಗಂಭೀರ ಗಾಯ

10 ವರ್ಷಗಳಲ್ಲಿ ಸುಮಾರು ₹250 ಕೋಟಿ ಭ್ರಷ್ಟಾಚಾರವಾಗಿದೆ. ಗಮನಕ್ಕೆ ಬಾರದ ಅನೇಕ ಖಾತೆಗಳಿಗೆ ಹಣ ಹೋಗಿವೆ. ಕೂಡಲೇ ರೈತರು ತಮ್ಮ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿಕೊಳ್ಳಬೇಕು ಎಂದು ಮನವಿ ಮಾಡಿದ ಅವರು, ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಯ್ಯ ಕಟ್ಟಿಮನಿ, ಮುಖಂಡರಾದ ಅಜೀಜ್ ಜಾಗೀರದಾರ್, ಸೈಯದ್ ಅಬ್ಬಾಸ್ ಅಲಿ, ಗಿರಿಲಿಂಗಯ್ಯ ಸ್ವಾಮಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X