ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಎಎಂಡಿ ಕ್ಯಾಂಪ್‌ನ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿ ಜಾಪಾನಾಯಕ ತಾಂಡಾದ ತಿಪ್ಪಣ್ಣ(35) ಎಂದು ತಿಳಿದುಬಂದಿದೆ. ಬೈಕಿನಲ್ಲಿ ತೆರಳುತ್ತಿದ್ದ ತಿಪ್ಪಣ್ಣನ ಮೇಲೆ ನಾಲ್ಕಾರು ಜನ ಸೇರಿ ಹಲ್ಲೆ ಮಾಡಿದ್ದಾರೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಹಳೇ ವೈಷಮ್ಯವೇ ಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರ ತನಿಖೆ ನಂತರವೇ ಸತ್ಯಾಂಶ ಬಯಲಾಗಲಿದೆ. ಘಟನಾ ಸ್ಥಳಕ್ಕೆ ಪಿಐ ಎಸ್ ಎಂ ಪಾಟೀಲ್ ಪೊಲೀಸ್ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಬಾದಾಮಿ | ತಳಕವಾಡದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ, ಅಪಾರ ನಷ್ಟ, ಸಂಕಷ್ಟದಲ್ಲಿ ರೈತ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿಎಸ್‌ಪಿ ಭೇಟಿ ನೀಡಿ ಪರಿಶೀಲನೆಗೆ ಸೂಚಿಸಿದರು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೊಲೆಯಾದ ತಿಪ್ಪಣ್ಣನ ಸಂಬಂಧಿಕರು ಸೇರಿದಂತೆ ಇತರರು ಆಗಮಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ವರದಿ: ವಾಲೆಂಟಿಯರ್ – ಸುರೇಶ ರೆಡ್ಡಿ