ಗದಗ | ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಯು ಕರ್ನಾಟಕ ಏಕೀಕರಣಕ್ಕೆ ಸ್ಪೂರ್ತಿ: ಸಚಿವ ಎಚ್ ಕೆ ಪಾಟೀಲ

Date:

Advertisements

ಹುಯಿಲಗೋಳ ನಾರಾಯಣರ ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಯು ಕರ್ನಾಟಕ ಏಕೀಕರಣಕ್ಕೆ ಸ್ಪೂರ್ತಿ ಗೀತೆಯಾಗಿತ್ತು ಎಂದು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ ಅವರು ಹೇಳಿದರು.

ಗದಗ ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾನುವಾರ ಆಯೋಜಿಸಲಾಗಿದ್ದ ಕರ್ನಾಟಕ ಸಂಭ್ರಮ ಸಮಾರೋಪ ನಿಮಿತ್ಯ ಸಂಗೀತ ಕಛೇರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಬೆಳಗಾವಿಯಲ್ಲಿ 1924ರ ಡಿಸೆಂಬರ್ 26ರಂದು ಮಹಾತ್ಮ ಗಾಂಧೀಜಿಯವರು ಎಐಸಿಸಿ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಗಂಗೂಬಾಯಿ ಹಾನಗಲ್ ಅವರು ಉದಯವಾಗಲಿ ಚಲುವ ಕನ್ನಡ ನಾಡು ಗೀತೆಯನ್ನು ಹಾಡಿದ್ದರು ಎಂಬುದು ನಮ್ಮೆಲ್ಲರಿಗೂ ಅಭಿಮಾನ ಹೆಮ್ಮೆ” ಎಂದರು.

Advertisements

“ಗದುಗಿನ ಇತಿಹಾಸದಲ್ಲಿ ಕರ್ನಾಟಕ ಸಂಭ್ರಮ-50 ಐತಿಹಾಸಿಕ ಮೈಲಿಗಲ್ಲು. ಕನ್ನಡ ಭಾಷೆಯನ್ನಾಡುವ ಕನ್ನಡಿಗರು ಒಂದೇ ರಾಜ್ಯದ ಆಳ್ವಿಕೆಯಲ್ಲಿ ಒಂದಾಗಬೇಕು ಎನ್ನುವ ಆಶಯದಂತೆ 1956ರ ನವಂಬರ್ 1ರಂದು ಕರ್ನಾಟಕ ಏಕೀಕರಣವಾಯಿತು. ಗದುಗಿನ ಕಾಟನ್ ಸೇಲ್ ಸೊಸೈಟಿಯಲ್ಲಿ 1961ರ ಡಿಸೆಂಬರ್‌ 27, 28 ಮತ್ತು 29ರಂದು ಜರುಗಿದ 43ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಕೆ ಜಿ ಕುಂದಣಗಾರ ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷ ಕೆ ಎಚ್ ಪಾಟೀಲ ಅವರ ಆಶಯದಂತೆ ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ನಾಮಕರಣವಾಗಲಿ ಎಂದು ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಲಾಯಿತು. ನಂತರ ಹೋರಾಟದ ಫಲವಾಗಿ 1973ರ ನವಂಬರ್ 01 ರಂದು ಮೈಸೂರು ರಾಜ್ಯ ‘ಕರ್ನಾಟಕ’ವೆಂದು ನಾಮಕರಣವಾಯಿತು” ಎಂದು ತಿಳಿಸಿದರು.

“ಕರ್ನಾಟಕ ಸಂಭ್ರಮಾಚರಣೆಯನ್ನು ಗದುಗಿನಲ್ಲಿ 1973ರ ನವಂಬರ್-03 ರಂದು ಹಂಪೆಯ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರಜ್ವಲಿಸಿದ ಕನ್ನಡ ಜ್ಯೋತಿಯನ್ನು ಗದುಗಿನ ವೀರನಾರಾಯಣ ದೇವಸ್ಥಾನದಲ್ಲಿ ಸ್ವೀಕರಿಸಿದ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್, ಮೈಸೂರಿನ ಅರಸರಾದ ಜಯಚಾಮರಾಜೇಂದ್ರ ಒಡೆಯರ್ ಹಾಗೂ ಅರಣ್ಯ ಮತ್ತು ಕೃಷಿ ಸಚಿವ‌ ಕೆ ಎಚ್ ಪಾಟೀಲ, ಪೌರಾಡಳಿತ ಸಚಿವ ಡಿ ಕೆ ನಾಯ್ಕರ, ಕನ್ನಡ ಮತ್ತು ಸಂಸ್ಕೃತಿ ಸಚಿವ ದೇವೇಂದ್ರಪ್ಪ ಗಾಳಪ್ಪ ಹಾಗೂ ಕನ್ನಡಾಭಿಮಾನಿಗಳು ವೀರನಾರಾಯಣ ದೇವಸ್ಥಾನದಿಂದ ಕಾಟನ್ ಸೇಲ್ ಸೊಸೈಟಿಯವರೆಗೆ ಮೆರವಣಿಗೆ ಮೂಲಕ ಬಂದು ಸಾರ್ವಜನಿಕ ಸಭೆ ನಡೆಸಿ ಕರ್ನಾಟಕವೆಂದು ನಾಮಕರಣವಾದ ಮಹೋತ್ಸವವನ್ನು ಸಂಭ್ರಮಿಸಿದ್ದು ಇತಿಹಾಸದಲ್ಲಿ ದಾಖಲಾರ್ಹ” ಎಂದು ನುಡಿದರು.

1973 ನವಂಬರ್ 01, 02 ಮತ್ತು 03ರಂದು ಜರುಗಿದ ಕರ್ನಾಟಕ ನಾಮಕರಣ ಮಹೋತ್ಸವವನ್ನು ಮರುಸೃಷ್ಟಿಸಿ, 2023ರ ನವಂಬರ್ 01, 02 ಮತ್ತು 03ರಂದು ಮೂರು ದಿನಗಳ ಕಾಲ ಗದಗ ನಗರದಲ್ಲಿ ಗತವೈಭವ ಮರುಕಳಿಸುವ ಐತಿಹಾಸಿಕ ಕಾರ್ಯಕ್ರಮಕ್ಕೆ ತಾವೆಲ್ಲ ಸಾಕ್ಷಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ ಸಚಿವ ಸಂಪುಟದ 20ಕ್ಕೂ ಹೆಚ್ಚು ಸಚಿವರು ಕನ್ನಡಾಭಿಮಾನಿಗಳು ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಾಮಕರಣ ಮಹೋತ್ಸವದ ಇತಿಹಾಸವನ್ನು ಮೆಲುಕು ಹಾಕಿದರು. ಇಂದು ‘ಕರ್ನಾಟಕ ಸಂಭ್ರಮ- 50’ ಒಂದು ವರ್ಷದ ಸಂಭ್ರಮಾಚರಣೆಯ ಸಮಾರೋಪ ಸಮಾರಂಭವಾಗಿದ್ದು, ಕನ್ನಡ ನಾಡು-ನುಡಿಯ ಅಭಿಮಾನ ಬೆಳೆಸಲು ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭ ಔಚಿತ್ಯಪೂರ್ಣವಾಗಿದೆ” ಎಂದು ಸಚಿವ ಡಾ ಎಚ್ ಕೆ ಪಾಟೀಲ ಹೇಳಿದರು.

“ಲಕ್ಕುಂಡಿಯಲ್ಲಿನ 20 ದೇವಸ್ಥಾನಗಳನ್ನು ಸರ್ಕಾರ ಗುರುತಿಸಿ ಸಂರಕ್ಷಣೆಗೆ ಮುಂದಾಗಲಿದೆ. ಈ ಮೂಲಕ ನಮ್ಮ ಐತಿಹಾಸಿಕ ಸ್ಮಾರಕಗಳು ಹಾಗೂ ಪರಂಪರೆಯನ್ನು ಯುವಜನತೆಗೆ ಪರಿಯಚಿಸುವ, ತಿಳಿಸಿಕೊಡುವ ಪ್ರಯತ್ನ ಸಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕಾಸರಗೋಡು ಕನ್ನಡ ಮಕ್ಕಳ ಕೊರಗು ಮುಗಿಯದ ಗೋಳು: ಶಕುಂತಲಾ ಶೆಟ್ಟಿ

ಖ್ಯಾತ ಗಾಯಕಿ ಉಷಾ ಕಾರಂತ, ಗಾಯಕ ನಾಗರಾಜ್ ಹಿರೇಕೊಳಚಿ ಹಾಗೂ ಸಂಗಮೇಶ್ ಕಲಬುರ್ಗಿ ಅವರುಗಳು ಸಂಗೀತ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸರ್ಕಾರಿ ಮುಖ್ಯ ಸಚೇತಕ ಹಾಗೂ ಶಾಸಕ ಸಲೀಂ ಅಹ್ಮದ್, ಮಾಜಿ ಸಂಸದ ಐಜಿ ಸನದಿ, ಮಾಜಿ ಶಾಸಕರಾದ ಡಿ ಆರ್ ಪಾಟೀಲ, ಗುರಣ್ಣ ಬಳಗಾನೂರ, ಎಂ ಸಿ ಶೇಖ, ರವಿ ಮೂಲಿಮನಿ, ವೀರನಾರಾಯಣ ತ್ರಿಕೋಟೇಶ್ವರ ದೇವಸ್ಥಾನ ಹಾಗೂ ಜುಮ್ಮಾಮಸಿದಿ ಸಮಿತಿಯ ಅಧ್ಯಕ್ಷ ಕೆ ಡಿ ಗೋಡಕಿಂಡಿ, ಕಾರ್ಯದರ್ಶಿ ಆನಂದ್ ಪೋತ್ನಿಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿಬಿ ಅಸೋಟಿ, ತಾಲೂಕ ಅಧ್ಯಕ್ಷ ಅಶೋಕ ಮಂದಾಲಿ, ಎಸ್ ಎನ್ ಬಳ್ಳಾರಿ, ಸಿದ್ದು ಪಾಟೀಲ, ಎಂ ಆರ್ ಪಾಟೀಲ, ಪ್ರಭು ಬುರಬುರೆ, ಸುಜಾತ ದೊಡ್ಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಪುರಾತತ್ವ ಇಲಾಖೆ ಆಯುಕ್ತ ದೇವರಾಜ್ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X