ಚನ್ನಪಟ್ಟಣದ ಅಭಿವೃದ್ಧಿ ಕೆಲಸ ನೋಡಿ ಜನ ಅಂಕ ನೀಡುತ್ತಾರೆ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಚದುರಂಗ ಆಡಿದವರೆಲ್ಲಾ ಮುಳುಗಿ ಹೋಗಿದ್ದಾರೆ. ಜನರಿಗೆ ಏನು ಲಾಭವಾಗಿದೆ, ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದರ ಆಧಾರದ ಮೇಲೆ ಜನ ಈ ಬಾರಿಯ ಚುನಾವಣೆ ತೀರ್ಮಾನ ಮಾಡಲಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು.

ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಕೇಳಿದಾಗ, “ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್, ಸಿ.ಪಿ. ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ಏನು ಕೊಡುಗೆ ಕೊಟ್ಟಿದ್ದಾರೆ ಎನ್ನುವುದನ್ನು ಜನರು ಪಟ್ಟಿ ಮಾಡುತ್ತಾರೆ. ಅದಕ್ಕೆ ಅವರೇ ಅಂಕ ನೀಡುತ್ತಾರೆ. ಇದರ ಹೊರತಾಗಿ ಯಾವ ರಣರಂಗವೂ ಇಲ್ಲ, ಯಾವುದೂ ಇಲ್ಲ” ಎಂದರು.

Advertisements

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕನಾದವನು ತನ್ನ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾನೆ. ಏನು ಅನುಕೂಲ ಕಲ್ಪಿಸಿ ಕೊಡುತ್ತಾನೆ. ಅವರ ಬದುಕನ್ನು ಯಾವ ರೀತಿ ಬದಲಾವಣೆ ಮಾಡುತ್ತಾನೆ ಎನ್ನುವುದು ಮುಖ್ಯ” ಎಂದು ಹೇಳಿದರು.

ಜಯನಗರ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡಿ ಎಂದು ಒಂದಷ್ಟು ಸೆಲೆಬ್ರಿಟಿಗಳು ಆಗ್ರಹ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಈ ವಿಚಾರ ನನಗೆ ಗೊತ್ತಿದೆ. ಈಗಾಗಲೇ ನಾನು 40 ಕೋಟಿ ರೂ.ಅನುದಾನ ಕೊಟ್ಟಿದ್ದೇನೆ. ಆ ಕ್ಷೇತ್ರದ ಶಾಸಕರು ಭಾನುವಾರ ನನ್ನನ್ನು ಭೇಟಿ ಮಾಡಿದ್ದರು. ಅವರ ಪ್ರಶ್ನೆಗಳಿಗೆ ಉತ್ತರ ಹೇಳಿದ್ದೇನೆ. ಆ ಕ್ಷೇತ್ರಕ್ಕೆ ಭೇಟಿ ಕೊಟ್ಟ ನಂತರ ಮುಂದಿನ ವಿಚಾರ ಹೇಳುತ್ತೇನೆ” ಎಂದರು.

ಬಿಜೆಪಿಯವರು ವಕ್ಫ್ ವಿಚಾರವಾಗಿ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಬಿಜೆಪಿಯವರು ಪ್ರತಿಭಟನೆ ಮಾಡುತ್ತಿಲ್ಲ. ಬದಲಾಗಿ ರಾಜಕೀಯ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ಆರ್. ಅಶೋಕ್, ಸಿ.ಟಿ. ರವಿ ಅವರೆಲ್ಲ ಚನ್ನಪ್ಪಟ್ಟಣದಲ್ಲಿ ಕುಮಾರಸ್ವಾಮಿಯವರಿಗೆ ಸಾಥ್ ಕೊಟ್ಟು, ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ ಎಂದು ಕೇಳಿದಾಗ, “ದಳದವರು ಮೈಸೂರು ಚಲೋ ಪಾದಯಾತ್ರೆ ವೇಳೆ ಸಾಥ್ ಕೊಡಲಿಲ್ಲ. ಅವರಂತೂ ಕೊಡಲಿಲ್ಲ, ಇವರಾದರೂ (ಬಿಜೆಪಿ) ಕೊಡಬೇಕಲ್ಲವೇ?” ಎಂದು ವ್ಯಂಗ್ಯವಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X